ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ: ಸಿಎಂ ಸ್ಪಷ್ಟನೆ ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆಯ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆಯ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸ್ಪಷ್ಟನೆ ನೀಡಿದ್ದಾರೆ.ಬೆಂಗಳೂರಿನ ಪ್ರೆಸ್ ಕ್ಲಬ್ ಆಯೋಜಿಸಿದ್ದ ‘ಮೀಟ್ ದಿ ಪ್ರೆಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಲೋಕಸಭೆ ಚುನಾವಣೆ ನಂತರ ಯಾವುದೇ ಸಚಿವ ಸಂಪುಟ ಪುನಾರಚನೆ ಸುದ್ದಿಗಳಲ್ಲಿ ಹುರುಳಿಲ್ಲ. ಆ ಬಗ್ಗೆ ನಾವಿನ್ನೂ ಯೋಚಿಸಿಲ್ಲ ಎಂದರು.ಸಚಿವ ಸಂಪುಟ ಪುನಾರಚನೆ ಮಾಡುವ ಯೋಚನೆ ಸದ್ಯಕ್ಕಿಲ್ಲ. ಯಾವುದೇ ಕಾರಣಕ್ಕೂ ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ. ಕಾಂಗ್ರೆಸ್ ಸರ್ಕಾರ ಇರವಷ್ಟೂ ದಿನ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ ಎಂದರು.ರಾಜ್ಯ ಸರ್ಕಾರವು ಇಂದಿಗೆ ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿ ಎರಡನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಾನು ಪರಸ್ಪರ ಶುಭ ಹಾರೈಸಿದೆವು. ನಾವು ಆರಂಭಿಸಿರುವ ಅಭಿವೃದ್ಧಿಯ ಈ ಹೊಸ ಪಯಣ ಮುಂದಿನ ನಾಲ್ಕು ವರ್ಷಗಳ ಕಾಲ ಯಾವುದೇ ಅಡೆತಡೆಯಿಲ್ಲದೆ ಸಾಗಲಿದೆ. #ವರ್ಷ‌ಒಂದು_ಹರ್ಷ… ../IXnxHtbIL6ಅಂತೆಯೇ ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ ಕಾಂಗ್ರೆಸ್ 15 ರಿಂದ 20 ಸ್ಥಾನಗಳನ್ನು ಪಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.ನಾಡಿನ ಏಳು ಕೋಟಿ ಕನ್ನಡಿಗರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷ. ಈ ಒಂದು ವರ್ಷದ ಅವಧಿಯಲ್ಲಿ ಪಾರದರ್ಶಕ, ಭ್ರಷ್ಟಾಚಾರ ರಹಿತವಾದ ಜನಪರ ಆಡಳಿತ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡಬೇಕೆಂಬ ಆಶಯ ನಮ್ಮದು, ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಬೆಂಬಲ ಇರಲಿ.… ../tas4EQvsMM