ಬೆಂಗಳೂರು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು ಸ್ನೇಹಿತರೊಂದಿಗೆ ಈಜಲು ಹೋಗಿದ್ದ 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಬೆಂಗಳೂರು: ಸ್ನೇಹಿತರೊಂದಿಗೆ ಈಜಲು ಹೋಗಿದ್ದ 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.ಧನುಷ್ (15) ಮೃತಪಟ್ಟ ವಿದ್ಯಾರ್ಥಿ. ಧನುಷ್ ತಂದೆ-ತಾಯಿ ಬೆಂಗಳೂರಿನಲ್ಲಿ ವಾಸವಿದ್ದು, ಈತ ತಾತ ಹಾಗೂ ಮಾವನ ಜೊತೆ ಅತ್ತಿಬೆಲೆಯಲ್ಲಿ ವಾಸವಿದ್ದ. ಭಾನುವಾರ ಮಧ್ಯಾಹ್ನ ಕ್ರಿಕೆಟ್ ಆಡುವುದಾಗಿ ಮನೆಯಿಂದ ಧನುಷ್‌ ಹೊರ ಹೋಗಿದ್ದ.ಕ್ರಿಕೆಟ್ ಆಡಲು ಹೋದವನು ಕೆರೆಯಲ್ಲಿ ಈಜಾಡಲು ತೆರಳಿದ್ದ. ಕೆರೆಯಲ್ಲಿ ನೀರು ತುಂಬಿದ್ದರಿಂದ ಈಜಾಡಲು ಬಾರದೇ ಮುಳುಗಿ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.ಭಾನುವಾರ ಸಂಜೆ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸೇರಿ ಹುಡುಕಾಟ ನಡೆಸಿದ್ದರು. ಆದರೆ, ಕತ್ತಲಾದ ಕಾರಣ ಹುಡುಕಾಟ ನಿಲ್ಲಿಸಲಾಗಿತ್ತು. ಇಂದು ಬೆಳಗ್ಗೆ ಬೆಳಿಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತೆ ಹುಡುಕಾಟ ಪ್ರಾರಂಭ ಮಾಡಿದಾಗ ಮೃತ ದೇಹ ಪತ್ತೆಯಾಗಿದೆ.