ರೈತನಿಗೆ ಅಪಮಾನ ಪ್ರಕರಣ: ತಾರತಮ್ಯ ತೋರಿದರೆ ಪರವಾನಗಿ ರದ್ದು, ಮಾಲ್‌ಗಳಿಗೆ ಎಚ್ಚರಿಕೆ! ರೈತನಿಗೆ ಅಪಮಾನ ಮಾಡಿದ ರೀತಿಯ ಪ್ರಕರಣಗಳು ಮರುಕಳಿಸಿದರೆ ಪರವಾನಗಿ ರದ್ದುಗೊಳಿಸಲಾಗುವುದು. ಜೊತೆಗೆ ಭಾರತೀಯ ನ್ಯಾಯ ಸಂಹಿತೆ ಅಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ. ಬೆಂಗಳೂರು: ಪಂಚೆಯುಟ್ಟಿದ್ದ ರೈತನಿಗೆ ಜಿಟಿ ಮಾಲ್‌ ಅಪಮಾನ ಮಾಡಿದ್ದ ಘಟನೆಗೆ ರಾಜ್ಯಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಮಾಲ್‌ಗಳಿಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಬಿಬಿಎಂಪಿ ವ್ಯಾಪ್ತಿಗೆ ಬರುವ ಎಲ್ಲಾ ವಾಣಿಜ್ಯ ಸಮುಚ್ಛಯಗಳು ಹಾಗೂ ಇತರೆ ಅಂಗಡಿಗಳ ಮಾಲೀಕರಿಗೆ ಮಾರ್ಗಸೂಚಿ ಹೊರಡಿಸಲಾಗಿದೆ.ಸಾರ್ವಜನಿಕರಿಗೆ ಪ್ರವೇಶ ಸಂದರ್ಭದಲ್ಲಿ ಭಾಷೆ, ಜಾತಿ, ಜನಾಂಗ, ಧರ್ಮ, ಉಡುಪು ಮತ್ತು ಜನ್ಮಸ್ಥಳ ಆಧಾರದಲ್ಲಿ ತಾರತಮ್ಯ ಮಾಡಬಾರದು. ಎಲ್ಲಾ ವಾಣಿಜ್ಯ ಸಮುಚ್ಚಯಗಳು ಉಡುಪಿನ ಆಧಾರದ ಮೇಲೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಣೆ ಮಾಡದಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಬೇಕು ಎಂದು ಸೂಚಿಸಿದೆ.ರೈತನಿಗೆ ಅಪಮಾನ ಮಾಡಿದ ರೀತಿಯ ಪ್ರಕರಣಗಳು ಮರುಕಳಿಸಿದರೆ ಪರವಾನಗಿ ರದ್ದುಗೊಳಿಸಲಾಗುವುದು. ಜೊತೆಗೆ ಭಾರತೀಯ ನ್ಯಾಯ ಸಂಹಿತೆ ಅಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.ಇತ್ತಿಚೆಗೆ ಜಿಟಿ ಮಾಲ್ನಲ್ಲಿ ಪಂಚೆ ಉಟ್ಟುಕೊಂಡು ಮಾಲ್ ಪ್ರವೇಶಿಸಲು ಮುಂದಾದ ವ್ಯಕ್ತಿಯೊಬ್ಬರನ್ನು ಕಾವಲುಗಾರ ತಡೆದು ನಿಲ್ಲಿಸಿದ್ದು ಭಾರಿ ಸಂಚಲನ ಸೃಷ್ಟಿಸಿತ್ತು. ಮಾಲ್' ಸಿಬ್ಬಂದಿಗಳ ವರ್ತನೆಗೆ ಕನ್ನಡಿಗರು ಕಿಡಿಕಾರಿದ್ದರು ಅಲ್ಲದೆ, ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಬಳಿಕ ಮಾಲ್ ಮಾಲೀಕರೇ ವ್ಯಕ್ತಿಯನ್ನು ಕರೆದು ಸನಾನ ಮಾಡಿದ್ದರು.ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ವಾಣಿಜ್ಯ ಸಮುಚ್ಚಯಗಳು ಹಾಗೂ ಇತರೆ ಅಂಗಡಿಗಳ ಮಾಲೀಕರುಗಳು ಸಾರ್ವಜನಿಕರಿಗೆ ಪ್ರವೇಶ ಸಂದರ್ಭದಲ್ಲಿ ಭಾಷೆ, ಜಾತಿ, ಜನಾಂಗ, ಧರ್ಮ, ಉಡುಪು ಮತ್ತು ಜನ್ಮಸ್ಥಳದ ಆಧಾರದ ಮೇಲೆ ಮಾತ್ರ ತಾರತಮ್ಯ ಮಾಡಬಾರದೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಸೂಚಿಸಿದ್ದು, ../xRh1uf9y1p