: ಮನೆ ಊಟ, ಬಟ್ಟೆ, ಬೆಡ್ ಗಾಗಿ ಅನುಮತಿ ಕೋರಿ ನಟ ಹೊಸ ಅರ್ಜಿ ‘ಮನೆಯಿಂದ ಊಟ, ಬಟ್ಟೆ ಮತ್ತು ಹಾಸಿಗೆ ತರಿಸಿಕೊಳ್ಳಲು ಅನುಮತಿ ನೀಡಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಹೈಕೋರ್ಟ್‌ನಲ್ಲಿ ಹೊಸ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜೈಲಿನಲ್ಲಿ ಮನೆ ಊಟ, ಬಟ್ಟೆ, ಬೆಡ್ ಗಾಗಿ ಅನುಮತಿ ಕೋರಿ ಮತ್ತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.‘ಮನೆಯಿಂದ ಊಟ, ಬಟ್ಟೆ ಮತ್ತು ಹಾಸಿಗೆ ತರಿಸಿಕೊಳ್ಳಲು ಅನುಮತಿ ನೀಡಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಹೈಕೋರ್ಟ್‌ನಲ್ಲಿ ಹೊಸ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಗೃಹದ ಅಧೀಕ್ಷಕರು ಮತ್ತು ಕಾಮಾಕ್ಷಿಪಾಳ್ಯದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಅವರನ್ನು ಪ್ರತಿವಾದಿಗಳನ್ನಾಗಿ ಕಾಣಿಸಲಾಗಿದೆ.ಹೈಕೋರ್ಟ್‌ ವಕೀಲೆ ಸಂಜೀವಿನಿ ಪಿ.ನಾವದಗಿ ವಕಾಲತ್ತು ವಹಿಸಿರುವ ಈ ಅರ್ಜಿಯು ಮಂಗಳವಾರ (ಜುಲೈ 31) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ.‘ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಆದೇಶ ರದ್ದುಪಡಿಸಬೇಕು. ಮನೆಯಿಂದ ಊಟ, ಬಟ್ಟೆ ಮತ್ತು ಹಾಸಿಗೆ ತರಿಸಿಕೊಳ್ಳಲು ನನಗೆ ಅನುಮತಿ ನೀಡುವಂತೆ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶಿಸಬೇಕು’ ಎಂದು ದರ್ಶನ್‌ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.