ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ಗೆ ಗುದ್ದಿ ಫ್ಲೈಓವರ್ನಿಂದ ಕೆಳಗೆ ಬಿದ್ದ ಕಾರು; ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್ಗೆ ಗುದ್ದಿದ ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಶವಂತಪುರ ಸರ್ಕಲ್ ಬಳಿ ಮಂಗಳವಾರ ಸಂಭವಿಸಿದೆ.ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್ಗೆ ಗುದ್ದಿದ ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದಿದೆ. ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.ಮೃತ ವ್ಯಕ್ತಿಯನ್ನು ಸೇಲಂನ ಶಬರೀಶ್(29) ಎಂದು ಗುರ್ತಿಸಲಾಗಿದ್ದು, ಗಾಯಾಳುಗಳನ್ನು ಶಂಕರ್ ರಾಮ್, ಅನುಶ್ರೀ, ಮಿಥುನ್ ಹಾಗೂ ಮಂಜುನಾಥ್ ಎಂದು ಗುರ್ತಿಸಲಾಗಿದೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು.ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು, ಮೊದಲಪ ಬೈಕ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಫ್ಲೈಓವರ್ನಿಂದ ಹಾರಿ ಕೆಳಗೆ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದ್ದು, ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.