ಇಂದಿನಿಂದ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸಸ್ಯೋದ್ಯಾನ ಲಾಲ್ ಬಾಗ್ ನಲ್ಲಿ ಪ್ರತೀ ವರ್ಷ ನಡೆಯುವ ಫಲಪುಷ್ಪ ಪ್ರದರ್ಶನ ಗುರುವಾರದಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಗಮ‌ ಸಂಚಾರಕ್ಕೆ ಪ್ರಮುಖ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ.ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಲಕ್ಷಾಂತರ ಜನರು ಭೇಟಿ ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.ಪಾರ್ಕಿಂಗ್ ಸ್ಥಳಗಳು ಇಂತಿವೆ...ಮರಿಗೌಡ ರಸ್ತೆಯ ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ಬೈಕ್ ಪಾರ್ಕಿಂಗ್ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ ವ್ಯವಸ್ಥೆಮರಿಗೌಡ ರಸ್ತೆಯ ಹಾಪ್ ಕಾಮ್ಸ್ನಲ್ಲಿ ಬೈಕ್ ಹಾಗೂ ಕಾರು ನಿಲುಗಡೆಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಹಾಗೂ ಕಾರು ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.ಪಾರ್ಕಿಂಗ್ ನಿಷೇಧಡಾ. ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ವರೆಗೆ ರಸ್ತೆಯ ಎರಡು ಬದಿಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್ವರೆಗೆ ರಸ್ತೆಯ ಎರಡು ಬದಿಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಭಾಗ್ ಮುಖ್ಯದ್ವಾರದ ವರೆಗೆಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್ವರೆಗೆಬಿಟಿಎಸ್ ಬಸ್ ನಿಲ್ದಾಣ, ಬಿಎಂಟಿಸಿ ಜಂಕ್ಷನ್ನಿಂದ ರಸ್ತೆಯ ಎರಡು ಬದಿಗಳಲ್ಲಿಕೃಂಬಿಗಲ್ ರಸ್ತೆಯ ಎರಡು ಕಡೆಗಳಲ್ಲಿಲಾಲ್‌ಬಾಗ್ ವೆಸ್ಟ್ಗೇಟ್‌ನಿಂದ ಆರ್.ವಿ. ಟೀರ್ಸ್ ಕಾಲೇಜ್‌ವರೆಗೆಆರ್‌ವಿ ಟೀರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲರ್ವರೆಗೆಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್ ವರೆಗೆಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡುವವರು ಸಂಚಾರ ದಟ್ಟಣೆಯನ್ನು ತಪ್ಪಿಸಲು ಮೆಟ್ರೋ, ಬಿಎಂಟಿಸಿ, ಇತ್ಯಾದಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸುವಂತೆಯೂ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.