ಖರ್ಗೆ ಪರಮಾಪ್ತ, ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ನಿಧನ: ಹಲವು ಗಣ್ಯರ ಸಂತಾಪ ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ‌ ಸೂಚಿಸಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಸರಡಗಿ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯರಾತ್ರಿ 01 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ದರ್ಗಾ ಪ್ರದೇಶದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ಕುಟುಂಬದ ಮೂಲಗಳ ಪ್ರಕಾರ, ಬುಧವಾರ ಸಂಜೆ ಹಫ್ತ್ ಗುಂಬಜ್ ಸಮೀಪದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. , , . , , … ../THFj5p0L0Rಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಇಕ್ಬಾಲ್ ಅಹಮದ್ ಸರಡಗಿ ಅವರು 1999 ಮತ್ತು 2004ರಲ್ಲಿ ಸಂಸದರಾದರು. 2008ರಲ್ಲಿ ಕ್ಷೇತ್ರಗಳ ವಿಂಗಡಣೆಯ ನಂತರ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರಿಂದ ಕ್ಷೇತ್ರದಲ್ಲಿ ಖರ್ಗೆ ಅವರು ಸ್ಪರ್ಧಿಸಿದರು. ಇಕ್ಬಾಲ್ ಅವರು ಒಂದು ಬಾರಿ ವಿಧಾನ ಪರಿಷತ್ತಿನ ಸದಸ್ಯರೂ ಆಗಿದ್ದರು.1944ರ ಜೂನ್ 5ರಂದು ಮೊಹಮದ್ ಅಹಮದ್ ಸರಡಗಿ ಮತ್ತು ಗೌಹರ್ ಬೇಗಂ ದಂಪತಿಗೆ ಜನಿಸಿದ್ದ ಇಕ್ಬಾಲ್, ಕಲಬುರಗಿಯ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಪದವಿ ಹಾಗೂ ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ದಿ ಎನ್.ಧರ್ಮಸಿಂಗ್ ಪರಮಾಪ್ತರಾಗಿದ್ದರು.ಮಾಜಿ ಸಂಸದರು ಹಾಗೂ ಹಿರಿಯ ನಾಯಕರಾದ ಶ್ರೀ ಇಕ್ಬಾಲ್ ಅಹ್ಮದ್ ಸರಡಗಿ ಅವರು ಇಂದು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಸ್ಥರಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ… ../4acFHjZkhDಇಕ್ಬಾಲ್ ಅಹಮದ್ ಸರಡಗಿ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.