ಮಂಗಳೂರು: ಶಾಲೆಯ ಛಾವಣಿ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ತರಗತಿ ನಡೆಯುತ್ತಿರುವಾಗಲೇ ಶಾಲೆಯ ಛಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರಿನಲ್ಲಿ ಮಂಗಳವಾರ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತರಗತಿ ನಡೆಯುತ್ತಿರುವಾಗಲೇ ಶಾಲೆಯ ಛಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಈ ವೇಳೆ ಹಲವು ಮಕ್ಕಳು ಮೈದಾನದಲ್ಲಿ ಆಟವಾಡುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.ಕಟ್ಟಡದ ದುರಸ್ತಿ ಕಾರ್ಯ ನಡೆಯುತ್ತಿದ್ದು, ಕಾಮಗಾರಿ ನಡೆಯುತ್ತಿರುವಾಗಲೇ ಮೇಲ್ಛಾವಣಿ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ದುರಸ್ತಿ ಕಾರ್ಯ ನಡೆಯುತ್ತಿದ್ದ ಕಟ್ಟಡದೊಳಗೆ ವಿದ್ಯಾರ್ಥಿಗಳನ್ನು ಕೂರಿಸಿದ ಶಿಕ್ಷಕರ ಬೇಜವಾಬ್ದಾರಿತನಕ್ಕೆ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಪೋಷಕರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ದೂರು ನೀಡಿದ್ದಾರೆ.