ಕೆಲಸದ ಒತ್ತಡದಲ್ಲಿ ಕೆಲವೊಮ್ಮೆ ಹೀಗಾಗುತ್ತದೆ: ರಕ್ತಸ್ರಾವದ ಕುರಿತು ಪ್ರತಿಕ್ರಿಯೆ ವಿಶ್ರಾಂತಿ ಪಡೆಯುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನನ್ನ ಆರೋಗ್ಯ ಸಂಪೂರ್ಣವಾಗಿ ಹದಗೆಟ್ಟಿಲ್ಲ. ಯಾರು ಆತಂಕ ಪಡುವ ಅಗತ್ಯವಿಲ್ಲ. ಭಗವಂತನ ಆಶೀರ್ವಾದ ಇದೆ ಎಂದು ಹೇಳಿದ್ದಾರೆ. ಬೆಂಗಳೂರು: ಸುದ್ದಿಗೋಷ್ಠಿ ವೇಳೆ ಮೂಗಿನಲ್ಲಿ ರಕ್ತಸ್ರಾವವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ''ಕೆಲಸದ ಒತ್ತಡದಲ್ಲಿ ಕೆಲವೊಮ್ಮೆ ಹೀಗಾಗುತ್ತದೆ'' ಎಂದು ಹೇಳಿದ್ದಾರೆ.ಮೂಗಿನಲ್ಲಿ ರಕ್ತಸ್ರಾವವಾದ ಬಳಿಕ ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಎಚ್ ಡಿ ಕುಮಾರಸ್ವಾಮಿ ಇದೀಗ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ರಾಂತಿ ಪಡೆಯುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನನ್ನ ಆರೋಗ್ಯ ಸಂಪೂರ್ಣವಾಗಿ ಹದಗೆಟ್ಟಿಲ್ಲ. ಯಾರು ಆತಂಕ ಪಡುವ ಅಗತ್ಯವಿಲ್ಲ. ಭಗವಂತನ ಆಶೀರ್ವಾದ ಇದೆ ಎಂದು ಹೇಳಿದ್ದಾರೆ.ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಮೂಗಿನಲ್ಲಿ ರಕ್ತಸ್ರಾವ ಆಗುತ್ತದೆ. ಮೂರು ಬಾರಿ ಹೃದಯದ ವಾಲ್ ಬದಲಾವಣೆ ಆಗಿದೆ. ಇದಕ್ಕಾಗಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದೆ. ಒತ್ತಡ, ವಿಶ್ರಾಂತಿ ಪಡೆಯದೆ ಕೆಲಸ ಮಾಡಿದ್ದರಿಂದ ಈ ರೀತಿ ಆಗಿದೆ. ರಾಜ್ಯದ ಜನರಿಗೆ ಕೆಲಸ ಮಾಡಿಕೊಡಬೇಕು ಅಂತ ಓಡಾಡುತ್ತಿದ್ದೆ. ಒತ್ತಡವನ್ನ ಕಡಿಮೆ ಮಾಡಿಕೊಳ್ಳಿ ಎಂದರು. - .# ../ToB0Xb5O8fಪಾದಯಾತ್ರೆ ಕುರಿತುಇದೇ ವೇಳೆ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆಗೆ ಇನ್ನೂ 1 ವಾರ ಇದೆ. ಪಾದಯಾತ್ರೆಯಲ್ಲಿ ಭಾಗಿಯಾಗುವ ಬಗ್ಗೆ ಆಮೇಲೆ ನೋಡೋಣ. ಅಂತಹ ಸಂದರ್ಭ ಬಂದರೆ ನಿಖಿಲ್‌ ಪಾದಯಾತ್ರೆಯಲ್ಲಿ ಭಾಗಿ ಆಗುತ್ತಾರೆ. ನಾಳೆ ರಾಜ್ಯಸಭೆಯಲ್ಲಿ ಕಾವೇರಿ ನದಿ ನೀರಿನ ಪ್ರಸ್ತಾಪ ಬಂದೇ ಬರುತ್ತೆ. ತಮಿಳುನಾಡಿನ ಸಂಸದರು ಭಾಷಣಕ್ಕೆ ಹಲವು ವರ್ಷಗಳಿಂದ ಅಡ್ಡಿಪಡಿಸ್ತಿದ್ದಾರೆ. ನಾನು ಈ ವೇಳೆ ಸದನದಲ್ಲಿ ಇರಬೇಕು ಅನ್ನೋದು ನನ್ನ ಆಸೆ ಎಂದು ಹೇಳಿದ್ದಾರೆ.ಸಿದ್ದರಾಮಯ್ಯ ಟ್ವೀಟ್ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.