ಪ್ರತ್ಯೇಕ ಅಪಘಾತ: ಮೂವರು ಬೈಕ್ ಸವಾರರ ದುರ್ಮರಣ ವಿಜಯನಗರದ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದಲ್ಲಿ ಬೈಕ್‌ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ ಬೆಂಗಳೂರು: ರಾಜ್ಯದ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ.ವಿಜಯನಗರದ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದಲ್ಲಿ ಬೈಕ್‌ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ.ಶಂಕರ್ (26) ಮೃತ ದುರ್ದೈವಿ. ಶಂಕರ್, ಸುಂಕಪ್ಪ ಇಬ್ಬರೂ ಪಿಕೆ ಹಳ್ಳಿ ಗ್ರಾಮದವರು. ಬುಕ್ಕಸಾಗರಿಂದ ಗಂಗಾವತಿಯತ್ತ ಬೈಕ್ ಬರುವಾಗ ಮುಖಾಮುಖಿ ಡಿಕ್ಕಿ ಆಗಿದೆ. ಮತ್ತೊಂದೆಡೆ, ಕೊಡಗಿನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬೈಕ್‌ವೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಕೊಡಗಿನ ಸುಂಟಿಕೊಪ್ಪ ಬಳಿಯ ಶಾಂತಿಗೇರಿಯಲ್ಲಿ ರಾತ್ರಿ ಅಪಘಾತ ನಡೆದಿದೆ.ಡಿಕ್ಕಿ ರಭಸಕ್ಕೆ ಬೈಕ್‌ ಸವಾರರು ಇಬ್ಬರು ದುರ್ಮರಣ ಹೊಂದಿದ್ದಾರೆ. ಪ್ರಸನ್ನ(24), ಆಕಾಶ್(24) ಮೃತ ದುರ್ದೈವಿಗಳು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.