ತುಮಕೂರು: ಲಂಚ ಪಡೆಯುತ್ತಿದ್ದ ವೇಳೆ ಮೂವರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಕಾಮಗಾರಿಗೆ ಸಂಬಂಧಿಸಿದ ಬಿಲ್ ಬಿಡುಗಡೆ ಮಾಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆಯಿಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಮೂವರು ಇಂಜಿನಿಯರ್ ಗಳು ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುಮಕೂರು: ಜಲ ಜೀವನ್ ಮಿಷನ್ ಯೋಜನೆ(ಜೆಜೆಎಂ)ಯ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು 1.51 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಮೂವರು ಇಂಜಿನಿಯರ್ ಗಳು ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಕಾಮಗಾರಿಗೆ ಸಂಬಂಧಿಸಿದ ಬಿಲ್ ಬಿಡುಗಡೆ ಮಾಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆಯಿಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಚಿಕ್ಕನಾಯಕನಹಳ್ಳಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯ ಕಾರ್ಯಪಾಲಕ ಇಂಜಿನಿಯರ್ ಉಮಾಮಹೇಶ್, ಇಂಜಿನಿಯರ್ ಶಶಿಕುಮಾರ್ ಹಾಗೂ ಸಹಾಯಕ ಇಂಜಿನಿಯರ್ ಕಿರಣ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.ಈ ಮೂವರು ಇಂಜಿನಿಯರ್ ಗಳು ಗಾಮಗಾರಿಯ ಒಟ್ಟು ಮೊತ್ತದಲ್ಲಿ ಶೇ. 6.5 ರಷ್ಟು ಲಂಚ ನೀಡುವಂತೆ ಗುತ್ತಿಗೆದಾರರಿಗೆ ಒತ್ತಾಯಿಸಿದ್ದರು.ಈ ಸಂಬಂಧ ಗುತ್ತಿಗೆದಾರ ಎನ್ ಸಿ ಚಿಕ್ಕೇಗೌಡ ಅವರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಚಿಕ್ಕನಾಯಕನಹಳ್ಳಿ ಕಚೇರಿಯಲ್ಲಿ ಲಂಚದ ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಮೂವರನ್ನು ಬಂಧಿಸಿದ್ದಾರೆ.