ಬೆಂಗಳೂರು: ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭ! ಅನಧಿಕೃತ ಬಡಾವಣೆಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಆರಂಭಿಸಿದೆ. ಬೆಂಗಳೂರು: ಅನಧಿಕೃತ ಬಡಾವಣೆಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಆರಂಭಿಸಿದೆ.ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಸ್ವಾಧೀನ ಪಡಿಸಿಕೊಂಡಿರುವ ಪ್ರದೇಶ, ಸಮಗ್ರ ಅಭಿವೃದ್ಧಿ ಯೋಜನಾ ಪ್ರದೇಶ (ಸಿಡಿಪಿ), ಶಿವರಾಮ ಕಾರಂತ ಬಡಾವಣೆ ಹಾಗೂ ಬಿಡಿಎ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳು ನಿರ್ಮಾಣ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ನಿರ್ಮಾಣಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಬಿಡಿಎ ಪ್ರಕಟಣೆ ತಿಳಿಸಿದೆ.ಖಾಸಗಿ ಬಡಾವಣೆ ನಿರ್ಮಾಣಕ್ಕೆ ಬಿಡಿಎಯಿಂದ ಬಡಾವಣೆ ನಕ್ಷೆಯ ಅನುಮೋದನೆಯನ್ನು ಪಡೆದುಕೊಳ್ಳಬೇಕು. ನಂತರ ಬಡಾವಣೆಯನ್ನು ರಚಿಸಿ, ನಿವೇಶನವನ್ನು ಹಂಚಿಕೆ ಮಾಡಬೇಕು. ಪ್ರಾಧಿಕಾರದಿಂದ ಬಡಾವಣೆಯ ನಕ್ಷೆಯನ್ನು ಅನುಮೋದನೆ ಪಡೆಯದೇ ಬಡಾವಣೆಯನ್ನು ನಿರ್ಮಿಸಿ, ನಿವೇಶನ ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ವಿಷಯವು ಪ್ರಾಧಿಕಾರದ ಗಮನಕ್ಕೆ ಬಂದಿದ್ದು, ಆಯುಕ್ತರ ಆದೇಶದಂತೆ ಜೂನ್‌ 7ರಿಂದ ತೆರವು ಕಾರ್ಯ ಆರಂಭಿಸಲಾಗಿದೆ. ಜೆ.ಬಿ. ಕಾವಲ್ ಗ್ರಾಮದಲ್ಲಿ ಸುಮಾರು ಐದು ಎಕರೆ ಪ್ರದೇಶದಲ್ಲಿ ಅನಧಿಕೃತ ಬಡಾವಣೆಯ ನಿರ್ಮಾಣ ಕಾಮಗಾರಿಯನ್ನು ತೆರವು ಗೊಳಿಸಲಾಗಿದೆ ಎಂದು ತಿಳಿಸಿದೆ.‌ಅನಧಿಕೃತ ಬಡಾವಣೆ ನಿರ್ಮಾಣ, ನಿವೇಶನಗಳ ಮಾರಾಟ ಮಾಡುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದೂ ಇದೇ ವೇಳೆ ಎಚ್ಚರಿಕೆ ನೀಡಿದೆ.