ಅಮ್ಮನಾದ ಮಿಲನಾ ನಾಗರಾಜ್‌: ತಾಯಿ ಮಗು ಕ್ಷೇಮ- ಡಾರ್ಲಿಂಗ್‌ ಕೃಷ್ಣ ಮಿಲನಾ ನಾಗರಾಜ್ ಅವರು ತಾಯಿ ಆಗಿದ್ದಾರೆ. ಈ ಖುಷಿ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ ಬೆಂಗಳೂರು: ಸ್ಯಾಂಡಲ್‌ವುಡ್‌ನ ಕ್ಯೂಟ್‌ ಕಪಲ್‌ ಮಿಲನಾ ನಾಗರಾಜ್‌ ಹಾಗೂ ಡಾರ್ಲಿಂಗ್‌ ಕೃಷ್ಣ ತಮ್ಮ ಮೊದಲನೆಯ ಮಗುವನ್ನು ಬರಮಾಡಿಕೊಂಡಿದ್ದಾರೆ. ಫೆಬ್ರವರಿ 14, 2021 ರಲ್ಲಿ ಮದುವೆಯಾಗಿದ್ದ ಈ ಜೋಡಿ, ಮದುವೆಯಾಗಿ ಮೂರು ವರ್ಷಗಳ ನಂತರ ತಮ್ಮ ಮೊದಲನೆಯ ಮಗುವಿಗೆ ಜನ್ಮ ನೀಡಿದ್ದಾರೆ.ಹೌದು, ಮಿಲನಾ ನಾಗರಾಜ್ ಅವರು ತಾಯಿ ಆಗಿದ್ದಾರೆ. ಈ ಖುಷಿ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಮಿಲನಾ ನಾಗರಾಜ್ ಅವರಿಗೆ ಹೆಣ್ಣುಮಗು ಜನಿಸಿದೆ. ಈ ವಿಚಾರವನ್ನು ದಂಪತಿ ರಿವೀಲ್ ಮಾಡಿದ್ದಾರೆ. ಮಗು ಹಾಗೂ ತಾಯಿಯ ಆರೋಗ್ಯ ಉತ್ತಮವಾಗಿದೆ ಎಂದು ಡಾರ್ಲಿಂಗ್ ಕೃಷ್ಣ ಅವರು ಮಾಹಿತಿ ಹಂಚಿಕೊಂಡಿದ್ದಾರೆ.ಮಿಲನಾ ನಾಗರಾಜ್ ಅವರನ್ನು ಡಾರ್ಲಿಂಗ್ ಕೃಷ್ಣ ಅವರು ಹೊಗಳಿದ್ದಾರೆ. ಅದೇ ರೀತಿ ಮಗಳು ಹುಟ್ಟಿದ್ದಕ್ಕೆ ಡಾರ್ಲಿಂಗ್ ಕೃಷ್ಣ ಅವರಿಗೆ ಸಾಕಷ್ಟು ಖುಷಿ ಆಗಿದೆ. ಹೆಣ್ಣು ಮಗು ಜನಿಸಬೇಕು ಎಂದು ಅವರ ಆಸೆ ಆಗಿತ್ತಂತೆ. ಈ ಆಸೆ ಈಡೇರಿದೆ.ಮಿಲನಾಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆಯೇ ಬಂದಿದೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಾ ಇದ್ದಾರೆ.