ನಿಖಿಲ್ ಕುಮಾರಸ್ವಾಮಿ ಚಿತ್ರಕ್ಕೆ ದುನಿಯಾ ವಿಜಯ್ ಎಂಟ್ರಿ ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರದಲ್ಲಿ ನಟ ದುನಿಯಾ ವಿಜಯ್ ಅವರು ಎಂಟ್ರಿ ಕೊಟ್ಟಿದ್ದಾರೆ. ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರದಲ್ಲಿ ನಟ ದುನಿಯಾ ವಿಜಯ್ ಅವರು ಎಂಟ್ರಿ ಕೊಟ್ಟಿದ್ದಾರೆ.ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ನಿಖಿಲ್ ಕುಮಾರಸ್ವಾಮಿಯವರು, ಖಚಿತಪಡಿಸಿದ್ದಾರೆ. ನಿಖಿಲ್ ಜೊತೆದೆ ದುನಿಯಾ ವಿಜಯ್ ವರು ತೆರೆ ಹಂಚಿಕೊಳ್ಳುತ್ತಿರುವುದು ಇದೇ ಮೊದಲಾಗಿದ್ದು, ಚಿತ್ರದ ಚಿತ್ರೀಕರಣ ನಗರದಲ್ಲಿ ಭರದಿಂದ ಸಾಗಿದೆ.ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ನಿಖಿಲ್ ಕುಮಾರಸ್ವಾಮಿ ಅಷ್ಟೇ ಅಲ್ಲದೆ, ಯುಕ್ತಿ ತಾರೇಜಾ ಮತ್ತು ಕೋಮಲ್ ಕುಮಾರ್ ಕೂಡ ನಟಿಸಿದ್ದಾರೆ.ಇದನ್ನೂ ಓದಿ: ಲೈಕಾ ಪ್ರೊಡಕ್ಷನ್ ನಿರ್ಮಿಸುತ್ತಿರುವ ನಿಖಿಲ್ ಕುಮಾರ್ ಸಿನಿಮಾದಲ್ಲಿ ದುನಿಯಾ ವಿಜಯ್ ಪಾತ್ರ?ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ್ದರೆ, ವಂಶಿ ಅವರು ಛಾಯಾಗ್ರಹಣ ನೀಡುತ್ತಿದ್ದಾರೆ. ರಘುನಾತ್ ಅವರು ಸಂಭಾಷಣೆ ಬರೆದಿದ್ದಾರೆ.ನಿಖಿಲ್ ಜೊತೆಗಿನ ಚಿತ್ರವಷ್ಟೇ ಅಲ್ಲದೆ, ದುನಿಯಾ ವಿಜಯ್ ಅವರು ತಾವೇ ನಿರ್ದೇಶನ ಮಾಡುತ್ತಿರುವ ಭೀಮಾ ಚಿತ್ರದಲ್ಲೂ ಬಿಝಿಯಾಗಿದ್ದಾರೆ. ಶೀಘ್ರದಲ್ಲೇ ಈ ಚಿತ್ರ ಬಿಡುಗಡೆಯಾಗಲಿದೆ. ಜಡೇಶಾ ಕೆ ಹಂಪಿ ಅವರ ಮುಂಬರುವ ಚಿತ್ರದಲ್ಲೂ ನಟಿಸುತ್ತಿದ್ದು, ಚಿತ್ರವು ಪ್ರೀ-ಪ್ರೊಡಕ್ಷನ್ ಹಂತದಲ್ಲಿದೆ.