ಗೋಲ್ಡನ್ ಸ್ಟಾರ್ ಗಣೇಶ್‌ 41ನೇ ಚಿತ್ರ 'ಕೃಷ್ಣಂ ಪ್ರಣಯ ಸಖಿ' ಶೂಟಿಂಗ್ ಮುಕ್ತಾಯ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮತ್ತು ಶ್ರೀನಿವಾಸ ರಾಜು ನಿರ್ದೇಶನದ ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು, ಇಟಲಿ ಮತ್ತು ಮಾಲ್ಟಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಡಬ್ಬಿಂಗ್ ಪ್ರಗತಿಯಲ್ಲಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮತ್ತು ಶ್ರೀನಿವಾಸ ರಾಜು ನಿರ್ದೇಶನದ ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು, ಇಟಲಿ ಮತ್ತು ಮಾಲ್ಟಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಡಬ್ಬಿಂಗ್ ಪ್ರಗತಿಯಲ್ಲಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವ ನಿರೀಕ್ಷೆಯಿದೆ.ದಂಡುಪಾಳ್ಯ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ರಾಜು ಮತ್ತು ಗಣೇಶ್ ಅವರು ಇದೇ ಮೊದಲ ಬಾರಿಗೆ ಈ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಿದ್ದು, ಐದು ಹಾಡುಗಳನ್ನು ಒಳಗೊಂಡಿದೆ. ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಮತ್ತು ಕೆಎಂ ಪ್ರಕಾಶ್ ಅವರ ಸಂಕಲನ ಚಿತ್ರಕ್ಕಿದೆ.ಕೃಷ್ಣಂ ಪ್ರಣಯ ಸಖಿ ಗಣೇಶ್ ಅವರ 41ನೇ ಚಿತ್ರವಾಗಿದ್ದು, ತ್ರಿಶೂಲ್ ಎಂಟರ್‌ಟೈನ್‌ಮೆಂಟ್ ಅಡಿಯಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿದ್ದಾರೆ. ಫ್ಯಾಮಿಲಿ ಎಂಟರ್‌ಟೈನರ್ ಆಗಿರುವ ಈ ಚಿತ್ರವು ಈ ಪ್ರೊಡಕ್ಷನ್ ಹೌಸ್‌ನ ಮೂರನೇ ಸಿನಿಮಾವಾಗಿದೆ. ಇದನ್ನೂ ಓದಿ: ಗಣೇಶ್ ಅಭಿನಯದ 'ಕೃಷ್ಣಂ ಪ್ರಣಯ ಸಖಿ' ತಂಡಕ್ಕೆ ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಶರಣ್ಯಾ ಶೆಟ್ಟಿ ಸೇರ್ಪಡೆಮಾಳವಿಕಾ ನಾಯರ್ ಈ ಚಿತ್ರದ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡಿದ್ದು, ಶರಣ್ಯಾ ಶೆಟ್ಟಿ, ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶೃತಿ, ಭಾವನಾ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘು ರಾಮಯ್ಯ, ಮಾನಸಿ ಸುಧೀರ್, ಅಂಬುಜ್ ಮತ್ತು ಗಿರಿ ಶಿವಣ್ಣ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.