ಅರ್ಜುನ್ ಸರ್ಜಾ ನಿರ್ದೇಶನದ ಹೊಸ ಸಿನಿಮಾಗೆ ಉಪ್ಪಿ ಅಣ್ಣನ ಮಗ ನಿರಂಜನ್ ಸುಧೀಂದ್ರ ಹೀರೋ! ‘ನಮ್ಮ ಹುಡುಗರು’ ಸಿನಿಮಾ ಮೂಲಕ ಭರವಸೆಯ ಯುವ ನಟನಾಗಿ ಮಿಂಚಿದ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಅವರು ಇದೀಗ ಬಹುಭಾಷೆಯಲ್ಲಿ ತಯಾರಾಗುತ್ತಿರುವ ಸಿನಿಮಾವೊಂದರತ್ತ ಮುಖ ಮಾಡಿದ್ದಾರೆ. ‘ನಮ್ಮ ಹುಡುಗರು’ ಸಿನಿಮಾ ಮೂಲಕ ಭರವಸೆಯ ಯುವ ನಟನಾಗಿ ಮಿಂಚಿದ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಅವರು ಇದೀಗ ಬಹುಭಾಷೆಯಲ್ಲಿ ತಯಾರಾಗುತ್ತಿರುವ ಸಿನಿಮಾವೊಂದರತ್ತ ಮುಖ ಮಾಡಿದ್ದಾರೆ.ಅರ್ಜುನ್ ಸರ್ಜಾ ನಿರ್ಮಾಣ ಹಾಗೂ ನಿರ್ದೇಶನ ಮಾಡುತ್ತಿರುವ ತೆಲುಗಿ ಚಿತ್ರದಲ್ಲಿ ನಿರಂಜನ್ ಸುಧೀಂದ್ರ ಅವರು ನಟಿಸುತ್ತಿದ್ದಾರೆ.ಚಿತ್ರದಲ್ಲಿ ಅರ್ಜನ್ ಸರ್ಜಾ ಅವರ ಪುತ್ರಿ ಐಶ್ವರ್ಯಾ ಅರ್ಜುನ್ ಅವರು ನಾಯಕಿ ನಟಿಯಾಗಿ ನಟಿಸುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಟ್ರೇಲರ್ ಕೂಡ ಬಿಡುಗಡೆಯಾಗಲಿದೆ.ತೆಲುಗು ಹಾಗೂ ಕನ್ನಡ ಭಾಷೆಯಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದ್ದು, ನಿರಂಜನ್ ಅವರು ತಮ್ಮ ಪಾತ್ರಕ್ಕಾಗಿ ಸಿದ್ಧತೆಗಳನ್ನು ನಡೆಯುತ್ತಿದ್ದಾರೆನ್ನಲಾಗಿದೆ. ಜುಲೈ ತಿಂಗಳಿನಲ್ಲಿ ಚಿತ್ರ ಸೆಟ್ಟೇರಲಿದೆ ಎಂದು ತಿಳಿದುಬಂದಿದೆ.ತೆಲುಗು ಚಿತ್ರದಲ್ಲಿ ನಟಿಸುತ್ತಿರುವ ಐಶ್ವರ್ಯಾ ಅರ್ಜುನ್ ಅವರ ಚಿತ್ರಕ್ಕೆ ಅರ್ಜುನ್ ಸರ್ಜಾ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆಂದು ಈ ಹಿಂದೆ ಹೇಳಲಾಗಿತ್ತು. ಇದಕ್ಕೆ ತೆಲುಗಿನ ಖ್ಯಾತ ನಟರೊಬ್ಬರು ನಾಯಕರಾಗಿ ಆಯ್ಕೆಯಾಗಿ, ಸಿನಿಮಾದ ಮುಹೂರ್ತ ಕೂಡ ನಡೆದಿತ್ತು. ಆದರೆ, ಕಾರಣಾಂತರಗಳಿಂದ ನಾಯಕ ನಟ ಆ ಸಿನಿಮಾದಿಂದ ಹೊರ ಬಂದಿದ್ದರು. ಅದೇ ಚಿತ್ರಕ್ಕೆ ಈಗ ನಾಯಕರಾಗಿ ನಿರಂಜನ್‌ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಈ ಹಿಂದೆ ತಮ್ಮ ಪುತ್ರಿ ಐಶ್ವರ್ಯಾ ಅವರನ್ನು ಕನ್ನಡದಲ್ಲಿ 'ಪ್ರೇಮ ಬರಹ' ಚಿತ್ರದ ಮೂಲಕ ಅರ್ಜುನ್ ಸರ್ಜಾ ಲಾಂಚ್ ಮಾಡಿದ್ದರು. ಅವರೇ ನಿರ್ಮಿಸಿ, ನಿರ್ದೇಶಿಸಿದ್ದ ಈ ಸಿನಿಮಾಕ್ಕೆ ಚಂದನ್ ಕುಮಾರ್ ಹೀರೋ ಆಗಿದ್ದರು.ಪ್ರಸ್ತುತ ನಿರಂಜನ್ ಅವರು ಕಮರ್ಷಿಯರ್ ಅಂಶಗಳೊಂದಿಗಿನ ಹೊಸ ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರದಲ್ಲಿ ಎರಡು ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಬಹುತೇಕ ಭಾಗಗಳ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯಲಿದೆ ಎನ್ನಲಾಗಿದೆ.ಇದನ್ನೂ ಓದಿ: ನಿರಂಜನ್ ಸುಧೀಂದ್ರ ನಟನೆಯ ಹಂಟರ್‌ ಸಿನಿಮಾಗೆ ಶರತ್‌ಕುಮಾರ್ ಎಂಟ್ರಿಹಂಟರ್ ಚಿತ್ರದ ಚಿತ್ರೀಕರಣದಲ್ಲಿ ನಿರಂಜನ್ ಅವರು ನಟಿಸುತ್ತಿದ್ದು, ಚಿತ್ರದ ಚಿತ್ರೀಕರಣ ಅಂತಿಮ ಹಂತದಲ್ಲಿದೆ. ಚಿತ್ರದ ಡಬ್ಬಿಂಗ್ ಕೆಲಸವನ್ನು ನಿರಂಜನ್ ಅವರು ಈಗಾಗಲೇ ಪೂರ್ಣಗೊಳಿಸಿದ್ದು, ಫೈಟಿಂಗ್ ಸೀಕ್ವೆನ್ಸ್ ಮತ್ತು ಹಾಡುಗಳ ಭಾಗ ಮಾತ್ರ ಬಾಕಿ ಉಳಿದಿದೆ ಎಂದು ತಿಳಿದುಬಂದಿದೆ. ಚಿತ್ರವನ್ನು ನವೆಂಬರ್ ಅಥವಾ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಚಿಂತನೆ ನಡೆಸಿದೆ ಎನ್ನಲಾಗಿದೆ.