ಪುತ್ರಿ ನಿವೇದಿತಾ ನಿರ್ಮಾಣದ ಮೊದಲ ಚಿತ್ರ 'ಫೈರ್ ಫ್ಲೈ' ನಲ್ಲಿ ಶಿವಣ್ಣ ಅತಿಥಿ ಪಾತ್ರ! ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಗಳು ನಿವೇದಿತಾ ಶಿವರಾಜ್‌ಕುಮಾರ್ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ನಟಿಯಾಗಿ ಅಲ್ಲ ಬದಲಿಗೆ ನಿರ್ಮಾಪಕಿಯಾಗಿ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಶ್ರೀ ಮುತ್ತು ಸಿನಿ ಸರ್ವೀಸ್‌ ಆರಂಭಿಸಿ ಸಿನಿಮಾಗಳನ್ನು ಮಾಡಲು ಮುಂದಾಗಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಗಳು ನಿವೇದಿತಾ ಶಿವರಾಜ್‌ಕುಮಾರ್ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ನಟಿಯಾಗಿ ಅಲ್ಲ ಬದಲಿಗೆ ನಿರ್ಮಾಪಕಿಯಾಗಿ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಶ್ರೀ ಮುತ್ತು ಸಿನಿ ಸರ್ವೀಸ್‌ ಆರಂಭಿಸಿ ಸಿನಿಮಾಗಳನ್ನು ಮಾಡಲು ಮುಂದಾಗಿದ್ದಾರೆ.ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾವನ್ನು ವಂಶಿ ಕೃಷ್ಣ ಶ್ರೀನಿವಾಸ್ ನಿರ್ದೇಶಿಸುತ್ತಿದ್ದಾರೆ, ಮಗಳ ಚಿತ್ರದಲ್ಲಿ ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಸೆಟ್ಟೇರಿದ ನಿವೇದಿತಾ ಶಿವರಾಜ್‌ಕುಮಾರ್‌ ನಿರ್ಮಾಣದ ಮೊದಲ ಸಿನಿಮಾ 'ಫೈರ್ ಫ್ಲೈ'; ಚಿತ್ರಕ್ಕೆ ಶಿವಣ್ಣ ದಂಪತಿ ಹಾರೈಕೆಬೈ ಮಿಸ್ಟೇಕ್ ಮತ್ತು ಹನಿಮೂನ್ ಕನ್ನಡ ವೆಬ್ ಸಿರೀಸ್ ನಿರ್ಮಾಣ ಮಾಡಿರುವ ನಿವೇದಿತಾ ಬಾಲ ನಟಿಯಾಗಿ ತಮ್ಮ ತಂದೆಯ ಜೊತೆ ಒಂದೆರಡು ಸಿನಿಮಾದಲ್ಲಿ ಅಭಿನಯಿಸಿದ್ದಾರೆ.ಈ ಹಿಂದೆ ಪ್ರೊಡಕ್ಷನ್ಸ್‌ನ ಮಾಯಾಬಜಾರ್‌ನಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವಂಶಿ, ಫೈರ್‌ಫ್ಲೈ ಮೂಲಕ ಚೊಚ್ಚಲ ನಿರ್ದೇಶನದ ಸಿನಿಮಾ ಮಾಡುತ್ತಿದ್ದಾರೆ. ಜೈ ರಾಮ್ ಸಹ-ನಿರ್ದೇಶಕರಾಗಿದ್ದಾರೆ. ರಘು ನಿಡುವಳ್ಳಿ ಚಿತ್ರದ ಸಂಭಾಷಣೆಗಳನ್ನು ರಚಿಸುತ್ತಿದ್ದು, ಅಭಿಲಾಷ್ ಕಲಹತ್ತಿ ಛಾಯಾಗ್ರಹಣವಿದೆ. ಚರಣ್ ರಾಜ್ ಸಂಗೀತವಿದೆ, ಇನ್ನೂ ನಟ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಹಲವು ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿವೆ.