ಭರ್ಜರಿ ಸದ್ದು ಮಾಡುತ್ತಿದೆ ಶಿವಣ್ಣನ ' ರಿಟರ್ನ್ಸ್': ಲಕ್ಕಿ ಗೋಪಾಲ್ ಜೊತೆಗೂಡಲಿದ್ದಾರೆ ಹೆಸರಾಂತ ಟೆಕ್ನಿಷಿಯನ್ಸ್! ನಟ ಡಾ. ಶಿವರಾಜ್ ಕುಮಾರ್ ಕೈಯ್ಯಲ್ಲಿ ಸದ್ಯ ಹಲವು ಚಿತ್ರಗಳಿವೆ, ಕೆಲವು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ, ಇದರ ಜೊತೆಗೆ ರಿಟರ್ನ್ಸ್ ಎಂಬ ಸಿನಿಮಾಗೂ ಶಿವಣ್ಣ ಸಹಿ ಹಾಕಿದ್ದಾರೆ. ನಟ ಡಾ. ಶಿವರಾಜ್ ಕುಮಾರ್ ಕೈಯ್ಯಲ್ಲಿ ಸದ್ಯ ಹಲವು ಚಿತ್ರಗಳಿವೆ, ಕೆಲವು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ, ಇದರ ಜೊತೆಗೆ ರಿಟರ್ನ್ಸ್ ಎಂಬ ಸಿನಿಮಾಗೂ ಶಿವಣ್ಣ ಸಹಿ ಹಾಕಿದ್ದಾರೆ. ಈಗ ‘ಐವಿ ರಿಟರ್ನ್ಸ್’ ಸಿನಿಮಾ ಹೆಸರಾಂತ ತಾಂತ್ರಿಕ ಬಳಗದ ಕಾರಣದಿಂದ ಸುದ್ದಿಯಲ್ಲಿದೆ.ಲಕ್ಕಿ ಗೋಪಾಲ್ ಚೊಚ್ಚಲ ಪ್ರಯತ್ನದ ಐವಿ ರಿಟರ್ನ್ಸ್ ಸಿನಿಮಾದಲ್ಲಿ ಹೆಸರಾಂತ ಟೆಕ್ನಿಷಿಯನ್‌ ಕೆಲಸ ಮಾಡಲಿದ್ದಾರೆ. ಹೀಗಾಗಿ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ. ತಮಿಳಿನ ಹೆಸರಾಂತ ಸಂಗೀತ ನಿರ್ದೇಶಕ ಅಮ್ರಿಷ್ ಈ ಸಿನಿಮಾದ ಹಾಡುಗಳನ್ನು ಕಂಪೋಸ್‌ ಮಾಡಿದ್ದು, ರುಸ್ತುಂ, ಘೋಸ್ಟ್ ಚಿತ್ರದ ಖ್ಯಾತಿಯ ಮಹೇನ್ ಸಿಂಹ ಸಿನಿಮಾಟೋಗ್ರಫಿಯಲ್ಲಿ ಐವಿ ರಿಟರ್ನ್ಸ್ ಸಿನಿಮಾ ಮೂಡಿ ಬರಲಿದೆ.ದೀಪು ಎಸ್ ಕುಮಾರ್ ಚಿತ್ರಕ್ಕೆ ಸಂಕಲನಕಾರರಾಗಿ ಕೆಲಸ ಮಾಡಿದ್ದಾರೆ. ವಿದ್ಯಾಧರಣ್ ಕಥೆ, ಮಾಸ್ತಿ ಸಂಭಾಷಣೆ ಚೇತನ್ ಡಿಸೋಜಾ ಅವರ ಸಾಹಸ ನಿರ್ದೇಶನ ಚಿತ್ರಕ್ಕೆ ಮತ್ತಷ್ಟು ರಂಗು ತುಂಬಲಿದೆ. ವೇಣುಗೋಪಾಲ್ ಅಸೋಸಿಯೇಟ್ ಡೈರೆಕ್ಟರ್ ಆಗಿ, ರೇಣುಕಾ ಪ್ರಸಾದ್ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿ, ಮೈಸೂರು ರಮೇಶ್ ಪ್ರೊಡಕ್ಷನ್ ಮ್ಯಾನೇಜರ್ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.ಇದನ್ನೂ ಓದಿ: ಶಿವಣ್ಣನ ಜೊತೆ ‘ಸಪ್ತಸಾಗರದಾಚೆ ಎಲ್ಲೋ’ ಖ್ಯಾತಿಯ ಹೇಮಂತ್ ರಾವ್ ನೂತನ ಸಿನಿಮಾ1989 ರಲ್ಲಿ ಬಿಡುಗಡೆ ಆಗಿದ್ದ ‘ಇನ್ಸ್‌ಪೆಕ್ಟರ್‌ ವಿಕ್ರಂ’ ಸಿನಿಮಾ ಶಿವರಾಜ್‌ಕುಮಾರ್‌ ಕರಿಯರ್‌ನಲ್ಲಿ ಅತ್ಯಂತ ವಿಶೇಷವಾಗಿತ್ತು. ಅವರು ತರಲೆ ಪೊಲೀಸ್‌ ಆಗಿ ನಟಿಸಿದ್ದ ಈ ಸಿನಿಮಾ ಆ ಕಾಲಕ್ಕೆ ಸೂಪರ್‌ ಹಿಟ್‌ ಆಗಿತ್ತು. ಈಗ ಅವರು ಮತ್ತೆ ಅಂತಹದ್ದೇ ಕಥೆಯೊಂದಿಗೆ ‘ಐವಿ ರಿಟರ್ನ್ಸ್’ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. 34 ವರ್ಷಗಳ ಹಿಂದೆ ದಿನೇಶ್‌ ಬಾಬು ‘ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ‘ಐವಿ ರಿಟರ್ನ್ಸ್’ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ಸೋದರ ಸಂಬಂಧಿ ಲಕ್ಕಿ ಗೋಪಾಲ್‌ ನಿರ್ದೇಶನದ ಕ್ಯಾಪ್‌ ತೊಟ್ಟಿದ್ದಾರೆ.ಶಿವರಾಜಕುಮಾರ್ ಸದ್ಯ ಕರಟಕ ಧಮನಕ ಬಿಡುಗಡೆಗಾಗಿ ಕಾಯುತ್ತಿದ್ದಾರೆ, ಮಾರ್ಚ್ 8 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಇದರ ಜೊತೆಗೆ ಭೈರತಿ ರಣಗಲ್ ಮತ್ತು 45 ರ ಚಿತ್ರೀಕರಣದಲ್ಲಿ ಶಿವಣ್ಣ ಬ್ಯುಸಿಯಾಗಿದ್ದಾರೆ. ಅದಾದ ನಂತರ ರಿಟರ್ನ್ಸ್‌ಗಾಗಿ ಚಿತ್ರೀಕರಣ ಪ್ರಾರಂಭವಾಗಲಿದೆ.