ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿಯನದ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರಕ್ಕೆ ಉದಯನಿಧಿ ಸ್ಟಾಲಿನ್ ಮೆಚ್ಚುಗೆ ರಕ್ಷಿತ್ ಶೆಟ್ಟಿ ಅವರ ಇತ್ತೀಚಿನ ಕನ್ನಡ ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ' ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ತಮಿಳುನಾಡು ಮುಖ್ಯಮಂತ್ರಿ ಪುತ್ರ, ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಕ್ಷಿತ್ ಶೆಟ್ಟಿ ಅವರ ಇತ್ತೀಚಿನ ಕನ್ನಡ ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ' ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ತಮಿಳುನಾಡು ಮುಖ್ಯಮಂತ್ರಿ ಪುತ್ರ, ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸಹೋದರ ರಕ್ಷಿತ್ ಶೆಟ್ಟಿ! ನಿಮ್ಮ ಇತ್ತೀಚಿನ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ತುಂಬಾ ಚೆನ್ನಾಗಿದೆ! ಅತ್ಯುತ್ತಮ ಚಲನಚಿತ್ರ ನಿರ್ಮಾಣ! ಇಡೀ ತಂಡಕ್ಕೆ ಅಭಿನಂದನೆಗಳು! ಮುಂದಿನ ಭಾಗಕ್ಕಾಗಿ ಕಾಯುತ್ತಿದ್ದೇನೆ' ಎಂದು ಬರೆದಿದ್ದಾರೆ. @ ! # ! ! ! Bಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ ಎರಡು ಭಾಗಗಳಲ್ಲಿ ತಯಾರಾಗಿದೆ. ಎರಡನೇ ಭಾಗವು ಅಕ್ಟೋಬರ್ 20ರಂದು ಬಿಡುಗಡೆಯಾಗಲಿದೆ. ರಕ್ಷಿತ್ ಶೆಟ್ಟಿ ಹೊರತುಪಡಿಸಿ, ಚಿತ್ರದಲ್ಲಿ ರುಕ್ಮಿಣಿ ವಸಂತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. , .ಉಧಯನಿಧಿ ಸ್ಟಾಲಿನ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ಹೇಮಂತ್ ರಾವ್, ಧನ್ಯವಾದಗಳು ಸರ್ ಎಂದಿದ್ದಾರೆ.ಇದನ್ನೂ ಓದಿ: ಹೇಮಂತ್ ರಾವ್ ಅವಕಾಶ ನೀಡಿದರೆ ನನ್ನ ನಿರ್ದೇಶನದ ಹೊರತಾಗಿಯೂ ನಟನೆಗೆ ಮರಳುತ್ತೇನೆ: ರಕ್ಷಿತ್ ಶೆಟ್ಟಿಚಿತ್ರವು ಸೆಪ್ಟೆಂಬರ್ 1 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ಹಲವರು ಈಗಾಗಲೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 'ಸಪ್ತ ಸಾಗರದಾಚೆ ಎಲ್ಲೋ' ಬಿಡುಗಡೆ ದಿನಾಂಕ ಘೋಷಣೆ: ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ಸಂತಸ'ಸಪ್ತ ಸಾಗರದಾಚೆ ಎಲ್ಲೋ' 2 ಪಾರ್ಟ್ ಗಳಲ್ಲಿ ಬಿಡುಗಡೆ, ಜೂನ್ 15ಕ್ಕೆ ದಿನಾಂಕ ಪ್ರಕಟ: ಬರ್ತ್ ಡೇ ಬಾಯ್ ರಕ್ಷಿತ್ ಶೆಟ್ಟಿ'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಶೂಟಿಂಗ್ ಪೂರ್ಣ: ಇದೊಂದು ಅದ್ಭುತ ಅನುಭವ ಎಂದ ಹೇಮಂತ್ ರಾವ್