ನೇಹಾ ಹತ್ಯೆ ಪ್ರಕರಣ: ಇಂಥ ಕೃತ್ಯ ಮಾಡುವವರ ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ- ನಟಿ ರಚಿತಾ ರಾಮ್‌ ಹುಬ್ಬಳ್ಳಿ ನೇಹಾ ಹಿರೇಮಠ್‌ ಹತ್ಯೆ ಪ್ರಕರಣ ಸಂಬಂದ ಪ್ರತಿಕ್ರಿಯೆ ನೀಡಿರುವ ನಟಿ ರಚಿತಾ ರಾಮ್ ಅವರು, ಇಂಥ ಕೃತ್ಯ ಮಾಡುವವರ ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಹೇಳಿದ್ದಾರೆ. ಬೆಂಗಳೂರು: ಹುಬ್ಬಳ್ಳಿ ನೇಹಾ ಹಿರೇಮಠ್‌ ಹತ್ಯೆ ಪ್ರಕರಣ ಸಂಬಂದ ಪ್ರತಿಕ್ರಿಯೆ ನೀಡಿರುವ ನಟಿ ರಚಿತಾ ರಾಮ್ ಅವರು, ಇಂಥ ಕೃತ್ಯ ಮಾಡುವವರ ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಹೇಳಿದ್ದಾರೆ.ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಹಾಕಿರುವ ರಚಿತಾ ರಾಮ್‌ ಅವರು, ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ. (@rachita_instaofficial)ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್‌ ಹಾಕಲು ಕಾರಣ ಆಕೆಗೆ (ನೇಹಾ) ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ನಟಿ ಅಭಿಪ್ರಾಯಪಟ್ಟಿದ್ದಾರೆ.ಸರ್ಕಾರಕ್ಕೆ ನನ್ನ ಒಂದು ಮನವಿ. ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.ಕೊಲೆಯಾದ ನೇಹಾ ಹಿರೇಮಠ್‌ ಫೋಟೊ ಜೊತೆಗೆ ಈ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ. ಅಲ್ಲದೇ # ಎಂದು ಟ್ಯಾಗ್‌ ಕೂಡ ಹಾಕಿದ್ದಾರೆ.