ಒಟಿಟಿಗೆ ಬಂತು 'ಸಲಾರ್': ಇಲ್ಲಿದೆ ಫುಲ್ ಡಿಟೈಲ್ಸ್ ಪ್ರಭಾಸ್ ಹಾಗೂ ಪೃಥ್ವಿರಾಜ ಸುಕುಮಾರನ್ ಮುಖ್ಯ ಪಾತ್ರದಲ್ಲಿರುವ, ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್' ಒಟಿಟಿಗೆ ಬರಲು ಸಿದ್ಧವಾಗಿದೆ. ನಾಳೆ (ಜ.20) : 1 - ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುತ್ತಿದೆ. ಮುಂಬೈ: ಪ್ರಭಾಸ್ ಹಾಗೂ ಪೃಥ್ವಿರಾಜ ಸುಕುಮಾರನ್ ಮುಖ್ಯ ಪಾತ್ರದಲ್ಲಿರುವ, ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್' ಒಟಿಟಿಗೆ ಬರಲು ಸಿದ್ಧವಾಗಿದೆ. ನಾಳೆ (ಜ.20) : 1 - ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುತ್ತಿದೆ.ಫ್ಯಾನ್‌ ಇಂಡಿಯಾ ಚಿತ್ರ ಸಲಾರ್‌ ಚಿತ್ರ, ಗಲ್ಲಾಪೆಟ್ಟಿಗೆಯಲ್ಲಿ 400 ಕೋಟಿ ರೂ ಗೂ ಹೆಚ್ಚು ಗಳಿಕೆ ಮಾಡಿದೆ. ಇದೀಗ ತೆಲುಗು, ಕನ್ನಡ. ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಒಟಿಟಿಯಲ್ಲಿ ತೆರೆ ಕಾಣುತ್ತಿದೆ. ಆದರೆ ಹಿಂದಿ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುವ ದಿನಾಂಕವನ್ನು ಘೋಷಣೆ ಮಾಡಿಲ್ಲ.ಇದನ್ನೂ ಓದಿ: ಸಲಾರ್ ಯಶಸ್ಸಿನ ಬಳಿಕ ಕ್ರೇಜ್ ಹೆಚ್ಚಿಸಿಕೊಂಡ ನಟ ಪ್ರಭಾಸ್; ಮುಂದಿನ ಸಿನಿಮಾ 'ದಿ ರಾಜಾ ಸಾಬ್' ಘೋಷಣೆಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ತಾಂತ್ರಿಕವಾಗಿ ‘ಕೆಜಿಎಫ್‌’ ತಂಡವೇ ಇದೆ. ರವಿ ಬಸ್ರೂರು ಸಂಗೀತ, ಭುವನ್‌ ಗೌಡ ಛಾಯಾಗ್ರಹಣ ಚಿತ್ರಕ್ಕಿದೆ. ಈ ಚಿತ್ರಕ್ಕೆ ಸೆನ್ಸಾರ್ ಬೋರ್ಡ್ ‘’ (ವಯಸ್ಕರಿಗೆ ಮಾತ್ರ) ಪ್ರಮಾಣ ಪತ್ರ ನೀಡಿದೆ.