7 ತಿಂಗಳ ಬಳಿಕ ಮಗಳ ಫೇಸ್ ರಿವೀಲ್ ಮಾಡಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಅವರ ಮಗಳನ್ನ ನೋಡಲು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಅವರ ಮಗಳನ್ನ ನೋಡಲು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.ಧ್ರುವ ಸರ್ಜಾ ಹಾಗೂ ಪ್ರೇರಣ ದಂಪತಿ ಇದೇ ಮೊದಲ ಬಾರಿಗೆ ತನ್ನ ಮುದ್ದು ಮಗಳ ಮುಖ ರಿವೀಲ್ ಮಾಡಿದ್ದಾರೆ. ಒಂದು ತಿಂಗಳಿದ್ದಾಗ ಕ್ಲಿಕ್ ಮಾಡಿದ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಫೋಸ್ಟ್ ಮಾಡಿರುವ ಧ್ರುವ ಸರ್ಜಾ, ಮಗಳಿಗೆ ಇನ್ನೂ ಹೆಸರಿಟ್ಟಿಲ್ಲ. ಮಗುವಿನ ಪಯಣ ಹಂಚಿಕೊಳ್ಳಲು ಖುಷಿ ಆಗುತ್ತದೆ ಎಂದಿದ್ದಾರೆ.ಇದನ್ನೂ ಓದಿ: 'ಮಚ್ ಲಕ್ಷ್ಮಿ' ಬರ್ತ್ತಿದ್ದಾಳೆ ದಾರಿ ಬಿಡಿ: 'ಕೆಡಿ' ಧ್ರುವ ಸರ್ಜಾಗೆ ರೀಷ್ಮಾ ನಾಣಯ್ಯ ನಾಯಕಿ!ಮುಂದಿನ ದಿನಗಳಲ್ಲಿ ಇ್ನೂ ಹೆಚ್ಚಿನ ಫೋಟೋಗಳು ಮತ್ತು ಅಪ್ ಡೇಟ್ ಹಂಚಿಕೊಳ್ಳುತ್ತೇನೆ ಎಂದು ಬರೆದುಕೊಂಡಿರುವ ಅವರು ಮೊದಲ ಬಾರಿಗೆ ಮಗಳ ಫೇಸ್ ರಿವೀಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಧ್ರುವ ಮಗಳ ಫೋಟೋ ಶೇರ್ ಮಾಡಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ. (@dhruva_sarjaa)