ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿಪುರುಷ್' ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿ ಪುರುಷ್' ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ. ಸಂಕ್ರಾಂತಿಗೆ ರಿಲೀಸ್ ಆಗಬೇಕಿದ್ದ ಈ ಚಿತ್ರ ಇದೀಗ ಜೂನ್ 16, 2023ಕ್ಕೆ ಮುಂದೂಡಲ್ಪಟ್ಟಿರುವುದಾಗಿ ನಿರ್ದೇಶಕ ಓಂ ರಾವತ್ ತಿಳಿಸಿದ್ದಾರೆ. ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿ ಪುರುಷ್' ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ. ಸಂಕ್ರಾಂತಿಗೆ ರಿಲೀಸ್ ಆಗಬೇಕಿದ್ದ ಈ ಚಿತ್ರ ಇದೀಗ ಜೂನ್ 16, 2023ಕ್ಕೆ ಮುಂದೂಡಲ್ಪಟ್ಟಿರುವುದಾಗಿ ನಿರ್ದೇಶಕ ಓಂ ರಾವತ್ ತಿಳಿಸಿದ್ದಾರೆ.ವೀಕ್ಷಕರಿಗೆ ಸಂಪೂರ್ಣ ದೃಶ್ಯ ಅನುಭವನ್ನು ಕಟ್ಟಿಕೊಡಬೇಕಾಗಿರುವುದರಿಂದ ತಂಡಕ್ಕೆ ಹೆಚ್ಚಿನ ಸಮಯಾವಕಾಶದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಬಿಗ್ ಬಜೆಟ್ ನ ಆದಿ ಪುರುಷ್ ಚಿತ್ರದ ಟೀಸರ್ ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಟು ಟೀಕೆ ವ್ಯಕ್ತವಾದ ಬೆನ್ನಲ್ಲೇ ಚಿತ್ರ ತಂಡ ಈ ನಿರ್ಧಾರ ತೆಗೆದುಕೊಂಡಿದೆ. ಈ ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಈ ಹಿಂದೆ ಜನವರಿ 12, 2023ಕ್ಕೆ ಬಿಡುಗಡೆಯಾಗುವುದಾಗಿ ಘೋಷಿಸಲಾಗಿತ್ತು.ಇದನ್ನೂ ಓದಿ: ಸಂಕ್ರಾಂತಿಗೆ ಆದಿಪುರುಷ್ ಜೊತೆ ವಾರಿಸು ಬಾಕ್ಸ್ ಆಫೀಸ್ ಪೈಪೋಟಿ!ಆದಿಪುರುಷ್ ಚಿತ್ರವಲ್ಲಾ, ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬದ್ದತೆಯನ್ನು ಪ್ರತಿನಿಧಿಸುತ್ತದೆ. ವೀಕ್ಷಕರಿಗೆ ಸಂಪೂರ್ಣ ದೃಶ್ಯಾನುಭವ ನೀಡಲು ಚಿತ್ರ ತಂಡಕ್ಕೆ ಹೆಚ್ಚಿನ ಸಮಯಾವಕಾಶದ ಅಗತ್ಯವಿದೆ. ಹಾಗಾಗೀ ಜೂನ್ ಜೂನ್ 16, 2023 ರಂದು ಬಿಡುಗಡೆಯಾಗಲಿದೆ ಎಂದು ರಾವತ್ ಟ್ವೀಟ್ ಮಾಡಿದ್ದಾರೆ. जय श्री राम…# 16, 2023.# # @ @ # # @ @rajeshnair06 # @ @ @RETROPHILES1 @UV_Creations @ ../kXNnjlEsibಈ ಚಿತ್ರದಲ್ಲಿ ಬಾಲಿವುಡ್ ನಟ ಸೈಫ್ ಆಲಿಖಾನ್ ರಾವಣನ ಪಾತ್ರದಲ್ಲಿ ಅಭಿನಯಸಿದ್ದಾರೆ.