ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಜೊತೆ ಅಭಿಷೇಕ್‌ ಅಂಬರೀಶ್‌ ನಿಶ್ಚಿತಾರ್ಥ ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಭಾನುವಾರ ನಗರದ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ನಡೆಯಿತು. ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಭಾನುವಾರ ನಗರದ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ನಡೆಯಿತು.ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಜೊತೆ ಅಭಿಷೇಕ್ ಅವರು ನಿಶ್ಚಿತಾರ್ಥ ನೆರವೇರಿಸಿಕೊಂಡರು.ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ಬಿದ್ದಪ್ಪ ಜೊತೆ ನಿಶ್ಚಿತಾರ್ಥ ನೆರವೇರಿದೆ. ಈ ವೇಳೆ ಅಭಿಷೇಕ್‌ ತಾಯಿ ಸುಮಲತಾ ಅಂಬರೀಶ್‌, ಅವಿವಾ ಅವರ ತಂದೆ-ತಾಯಿ ಹಾಗೂ ನಟ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಹಾಜರಿದ್ದು, ಜೋಡಿಗಳಿಗೆ ಶುಭಹಾರೈಸಿದರು.: ಅಭಿಷೇಕ್-ಅವಿವಾ ನಿಶ್ಚಿತಾರ್ಥಕ್ಕೆ ಯಶ್, ದರ್ಶನ್ ಆಗಮನ; ಶುಭ ಹಾರೈಕೆ!ಅವಿವಾ ಮತ್ತು ಅಭಿಷೇಕ್ ಹಲವು ವರ್ಷಗಳಿಂದ ಸ್ನೇಹಿತರಾಗಿದ್ದು, ಈ ಸ್ನೇಹ ಪ್ರೇಮಕ್ಕೆ ತಿರುಗಿ ಇದೀಗ ಜೊತೆಯಾಗಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ.ಅವಿವಾ ಕೂಡ ತಮ್ಮ ತಂದೆಯ ಹಾದಿಯಲ್ಲೇ ಸಾಗಿದ್ದು, ಫ್ಯಾಷನ್ ಲೋಕದಲ್ಲೇ ಕೆಲಸ ಮಾಡುತ್ತಿದ್ದಾರೆ. ಈ ಜೋಡಿಯ ಮದುವೆ ಮುಂದಿನ ವರ್ಷ ನಡೆಯಲಿದೆ ಎಂದು ತಿಳಿದುಬಂದಿದೆ.