'ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ' ಸಿನಿಮಾ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ, ರಿಲೀಸ್ ಡೇಟ್ ಮುಂದಕ್ಕೆ! ನಟ ರಕ್ಷಿತ್ ಶೆಟ್ಟಿ ಅಭಿನಯದ ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಸಿನಿಮಾ ಸೆಪ್ಟೆಂಬರ್ 1 ರಾಜ್ಯದಾದ್ಯಂತ ಬಿಡುಗಡೆಯಾಗಿತ್ತು ಮತ್ತು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿತ್ತು. ನಟ ರಕ್ಷಿತ್ ಶೆಟ್ಟಿ ಅಭಿನಯದ ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಸಿನಿಮಾ ಸೆಪ್ಟೆಂಬರ್ 1 ರಾಜ್ಯದಾದ್ಯಂತ ಬಿಡುಗಡೆಯಾಗಿತ್ತು ಮತ್ತು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿತ್ತು. ಎರಡು ಭಾಗಗಳಲ್ಲಿ ತಯಾರಾಗಿದ್ದ ಚಿತ್ರದ ಎರಡನೇ ಭಾಗವನ್ನು ಅಕ್ಟೋಬರ್ 20ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಈ ಹಿಂದೆ ಹೇಳಿತ್ತು. ಆದರೆ, ಇದೇ ಅವಧಿಯಲ್ಲಿ ಶಿವರಾಜಕುಮಾರ್ ಅಭಿನಯದ ಘೋಸ್ಟ್, ತಮಿಳಿನ ದಳಪತಿ ವಿಜಯ್ ಅಭಿನಯದ ಲಿಯೋ, ರವಿತೇಜ ಅವರ ಟೈಗರ್ ನಾಗೇಶ್ವರ ರಾವ್, ನಂದಮೂರಿ ಬಾಲಕೃಷ್ಣ ಅವರ ಭಗವಂತ ಕೇಸರಿ, ಟೈಗರ್ ಶ್ರಾಫ್ ಅವರ ಗಣಪತ್ ಸೇರಿದಂತೆ ಹಲವು ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಪೈಪೋಟಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ, ಎಸ್ಎಸ್ಇ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.ಈ ಕುರಿತು ರಕ್ಷಿತ್ ಶೆಟ್ಟಿ ಮತ್ತು ನಿರ್ದೇಶಕ ಹೇಮಂತ್ ಎಂ ರಾವ್ ಟ್ವೀಟ್ ಮಾಡಿದ್ದು, ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಅಕ್ಟೋಬರ್ 27 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದಿದ್ದಾರೆ. ಚಿತ್ರದಲ್ಲಿ ರಕ್ಷಿತ್ ಜೊತೆಗೆ ನಟಿ ಚೈತ್ರಾ ಜೆ ಆಚಾರ್ ಕಾಣಿಸಿಕೊಂಡಿದ್ದಾರೆ. , ! - 27th . #SSESideBOct27 @hemanthrao11 @… ../neFE17ZiLF'ನಮ್ಮ ಪ್ರಯಾಣದ ದಾರಿ ಬದಲಾಗಿದೆ. ಆದರೆ, ಗಮ್ಯಸ್ಥಾನವು ಒಂದೇ ಆಗಿರುತ್ತದೆ! ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಸಿನಿಮಾ ಅಕ್ಟೋಬರ್ 27ರಂದು ತೆರೆಕಾಣಲಿದೆ. ಚಿತ್ರದ ಮುಂದುವರಿದ ಭಾಗವನ್ನು ಅಷ್ಟೇ ಪ್ರೀತಿ ಮತ್ತು ಬೆಂಬಲದೊಂದಿಗೆ ಸ್ವೀಕರಿಸುವಿರಿ ಎಂದು ನಾವು ಭಾವಿಸುತ್ತೇವೆ' ಎಂದು ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.ಇದನ್ನೂ ಓದಿ: ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಪ್ರೈಮ್ ವಿಡಿಯೋದಲ್ಲಿ ಲಭ್ಯಪರಂವಃ ಪಿಕ್ಚರ್ಸ್ ನಿರ್ಮಾಣದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಪವಿತ್ರಾ ಲೋಕೇಶ್, ಅವಿನಾಶ್, ಶರತ್ ಲೋಹಿತಾಶ್ವ, ರಮೇಶ್ ಇಂದಿರಾ ಮತ್ತು ಅಚ್ಯುತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.