'ಹಿರಣ್ಯ' ನನ್ನನ್ನು ಸಂಪೂರ್ಣ ಆ್ಯಕ್ಷನ್ ಹೀರೋ ಆಗಿ ಮಾರ್ಪಡಿಸಿದೆ: ರಾಜವರ್ಧನ್ ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ‘ಹಿರಣ್ಯ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಬೆಂಗಳೂರು ಸುತ್ತಮುತ್ತ ಇಡೀ ಚಿತ್ರದ ಚಿತ್ರೀಕರಣ ನಡೆದಿದೆ. ಇದೀಗ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ‘ಹಿರಣ್ಯ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಬೆಂಗಳೂರು ಸುತ್ತಮುತ್ತ ಇಡೀ ಚಿತ್ರದ ಚಿತ್ರೀಕರಣ ನಡೆದಿದೆ. ಇದೀಗ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ.‘ಹಿರಣ್ಯ’ ಸಿನಿಮಾಗೆ ಪ್ರವೀಣ್ ಅವ್ಯುಕ್ತ್ ಆ್ಯಕ್ಷನ್ ಕಟ್ ಹೇಳಿದ್ದು, ಈಗಾಗಲೇ ಹಲವು ಶಾರ್ಟ್ ಮೂವಿಗಳನ್ನು ಮಾಡಿದ ಅನುಭವ ಇರುವ ಪ್ರವೀಣ್, ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದಲ್ಲಿ ನಿರ್ದೇಶಕನಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ.ಚೊಚ್ಚಲ ಚಿತ್ರ ಬಿಚ್ಚುಗತ್ತಿಯಲ್ಲಿನ ಸಾಹಸ ದೃಶ್ಯಗಳನ್ನು ನೋಡಿ ನಿರ್ದೇಶಕರು ನನಗೆ ಈ ಪಾತ್ರವನ್ನು ನೀಡಿದರು. ಚಿತ್ರದಲ್ಲಿ 7 ಫೈಟ್ ಗಳನ್ನು ಮಾಡಿದ್ದೇನೆ. ಪ್ರತಿಯೊಂದನ್ನೂ 10-20 ದಿನಗಳವರೆಗೆ ಚಿತ್ರೀಕರಿಸಲಾಗಿದೆ. ಈ ಪ್ರತಿಯೊಂದು ಸ್ಟಂಟ್'ಗಳಿಗೂ ಬಜೆಟ್ ದೊಡ್ಡದಾಗಿಯೇ ಇದೆ. ಚಿತ್ರದ ಮೂಲಕ ಫುಲ್ ಆ್ಯಕ್ಷನ್ ಹೀರೋ ಆಗಿ ಪರಿವರ್ತನೆಗೊಂಡಿದ್ದೇನೆಂದು ರಾಜವರ್ಧನ್ ಅವರು ಹೇಳಿದ್ದಾರೆ.ಇದನ್ನೂ ಓದಿ: ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದ 'ಐ ಯಾಮ್ ಕಲ್ಕಿ' ಸಿನಿಮಾದಲ್ಲಿ ರಾಜವರ್ಧನ್ಚಿತ್ರದಲ್ಲಿ ರಾಜವರ್ಧನ್‌ಗೆ ಜೋಡಿಯಾಗಿ ಮಾಡೆಲ್ ರಿಹಾನಾ ನಟಿಸಿದ್ದು, ಈ ಚಿತ್ರದ ಮೂಲಕ ರಿಹಾನಾ ಸ್ಯಾಂಡಲ್‌ವುಡ್ ಪ್ರವೇಶಿಸಿದ್ದಾರೆ.ಕಂಪ್ಲೀಟ್ ಆಕ್ಷನ್ ಥ್ರಿಲ್ಲರ್ ಜೊತೆಗೆ ತಾಯಿ ಸೆಂಟಿಮೆಂಟ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್‌ನಲ್ಲಿ ಕಾಣಿಸಿಕೊಂಡಿದ್ದು, ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.ವೇದಾಸ್ ಇನ್ಫಿನಿಟಿ ಪಿಕ್ಚರ್ ಬ್ಯಾನರ್‌ನಡಿ ವಿಘ್ನೇಶ್ವರ. ಯು- ವಿಜಯ್ ಕುಮಾರ್ ಬಿ.ವಿ ‘ಹಿರಣ್ಯ’ ಸಿನಿಮಾಗೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಯೋಗೇಶ್ವರನ್ ಆರ್ ಛಾಯಾಗ್ರಹಣವಿದೆ.ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಶೀಘ್ರಗತಿಯಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿ ನಿರತವಾಗಿದೆ.