'ಜೊತೆಜೊತೆಯಲಿ' ಧಾರಾವಾಹಿ: ಅನಿರುದ್ಧ್ ಪಾತ್ರಕ್ಕೆ ವಿಕ್ರಾಂತ್ ರೋಣ ನಿರ್ದೇಶಕ ಅನೂಪ್ ಭಂಡಾರಿ? ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಜೊತೆಜೊತೆಯಲಿ' ಧಾರಾವಾಹಿಯ ನಾಯಕ ನಟ ಅನಿರುದ್ಧ್ ಹಾಗೂ ನಿರ್ದೇಶಕ ಆರೂರು ಜಗದೀಶ್ ಮತ್ತು ವಾಹಿನಿ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿ ಇತ್ತೀಚೆಗೆ ಇಬ್ಬರೂ ಸುದ್ದಿಗೋಷ್ಠಿ ನಡೆಸಿ ಆರೋಪ-ಪ್ರತ್ಯಾರೋಪಗಳನ್ನು ಮಾಡಿದ್ದರು. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಜೊತೆಜೊತೆಯಲಿ' ಧಾರಾವಾಹಿಯ ನಾಯಕ ನಟ ಅನಿರುದ್ಧ್ ಹಾಗೂ ನಿರ್ದೇಶಕ ಆರೂರು ಜಗದೀಶ್ ಮತ್ತು ವಾಹಿನಿ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿ ಇತ್ತೀಚೆಗೆ ಇಬ್ಬರೂ ಸುದ್ದಿಗೋಷ್ಠಿ ನಡೆಸಿ ಆರೋಪ-ಪ್ರತ್ಯಾರೋಪಗಳನ್ನು ಮಾಡಿದ್ದರು.ಈ ಮಧ್ಯೆ ಅನಿರುದ್ಧ್ ಅವರು ನಿರ್ವಹಿಸುತ್ತಿದ್ದ ಪಾತ್ರಕ್ಕೆ ವಿಕ್ರಾಂತ್ ರೋಣ, ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿಯರನ್ನು ಚಾನೆಲ್ ಕರೆತರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ನಿರ್ದೇಶಕರು ಮತ್ತು ಜೀ ಕನ್ನಡ ವಾಹಿನಿ ಕಡೆಯಿಂದ ಅಧಿಕೃತ ಮಾಹಿತಿ ಸಿಗಬೇಕಿದೆ..@ @ @AniruddhaJatka1 # ? ' . @ ../d81Mp2aoFvಇದನ್ನೂ ಓದಿ: ಜೊತೆ ಜೊತೆಯಲಿ ಸೀರಿಯಲ್ ಸೆಟ್ ನಲ್ಲಿ 'ಆರ್ಯವರ್ಧನ್' ಕಿರಿಕ್: ಕಿರುತೆರೆಯಿಂದಲೇ ನಟ ಅನಿರುದ್ಧ್ಗೆ ಗೇಟ್ ಪಾಸ್?