ಸೂಪರ್ ಸ್ಟಾರ್ ರಜನಿಕಾಂತ್ ಗೆ 72ನೇ ಹುಟ್ಟುಹಬ್ಬದ ಸಂಭ್ರಮ; ಶುಭಾಶಯಗಳ ಮಹಾಪೂರ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಇಂದು 72ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ಹಿರಿಯ ನಟರಾದ ಕಮಲ್ ಹಾಸನ್, ಡಾ. ಶಿವರಾಜ್ ಕುಮಾರ್ ಸೇರಿದಂತೆ ದೇಶಾದ್ಯಂತ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಚೆನ್ನೈ: ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಇಂದು 72ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ಹಿರಿಯ ನಟರಾದ ಕಮಲ್ ಹಾಸನ್, ಡಾ. ಶಿವರಾಜ್ ಕುಮಾರ್ ಸೇರಿದಂತೆ ದೇಶಾದ್ಯಂತ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಸಾಮಾಜಿಕ ಜಾಲತಾಣ ಟ್ವೀಟರ್ ಮೂಲಕ ಡಾ. ಶಿವರಾಜ್ ಕುಮಾರ್ ಶುಭಾಶಯ ಕೋರಿದ್ದಾರೆ. ಶಿವಣ್ಣ ಹಾಗೂ ರಜನಿಕಾಂತ್ ಪರಸ್ಪರ ಸಿಹಿ ತಿನ್ನಿಸುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದು, ನನಗೆ ಸ್ಫೂರ್ತಿಯಾದ ಅದ್ಭುತ ವ್ಯಕ್ತಿತ್ವ ಎಂದು ಬರೆದುಕೊಂಡಿದ್ದಾರೆ.ನನಗೆ ಸ್ಫೂರ್ತಿಯಾದ ಅದ್ಭುತ ವ್ಯಕ್ತಿತ್ವ; ಹುಟ್ಟುಹಬ್ಬದ ಶುಭಾಶಯಗಳು @ ../GrPKXjBxjgನಿಮ್ಮ ಯಶಸ್ಸಿನ ಪ್ರಯಾಣವನ್ನು ಮುಂದುವರಿಸಿ ಎಂದು ತಮಿಳಿನ ಮತ್ತೋರ್ವ ಖ್ಯಾತ ನಟ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ. ರಜನಿ ಕಾಂತ್ ಅವರ ಮಾಜಿ ಅಳಿಯ ಧನುಶ್ ಟ್ವೀಟ್ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. # ! & #@ # # ../uK7xw8XF1SWishing # , , , , & ⁦@⁩ !# ../yF4th3SJF2ರಜನಿಕಾಂತ್ 1950 ಡಿಸೆಂಬರ್ 12 ರಂದು ಶಿವಾಜಿ ರಾವ್ ಗಾಯಕ್ವಾಡ್ ಅವರ ಪುತ್ರನಾಗಿ ಬೆಂಗಳೂರಿನಲ್ಲಿ ಜನಿಸಿದರು. 1975ರಲ್ಲಿ ತಮಿಳು ಅಪೂರ್ವ ರಾಗಂಗಳ್ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು, ವಿಭಿನ್ನ ಪಾತ್ರಗಳ ಮೂಲಕ ಜನಪ್ರಿಯರಾಗಿದ್ದು, ದಾದಾ ಸಾಹೇಬ್ ಪಾಲ್ಕೆ, ಪದ್ಮ ವಿಭೂಷಣ, ಪದ್ಮ ಭೂಷಣ, ಎನ್ ಟಿಆರ್ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ- ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.