ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ; ಅಪರಾಧಿಗೆ ಅತ್ಯುಗ್ರ ಶಿಕ್ಷೆಯಾಗಲಿ: ಧ್ರುವ ಸರ್ಜಾ ಹುಬ್ಬಳ್ಳಿಯಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಘಟನೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಧ್ರುವ ಸರ್ಜಾ ಖಂಡಿಸಿದ್ದಾರೆ. ಬೆಂಗಳೂರು: ಹುಬ್ಬಳ್ಳಿಯಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಘಟನೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಧ್ರುವ ಸರ್ಜಾ ಖಂಡಿಸಿದ್ದಾರೆ.ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. ಸಹೋದರಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಹೀನ ಕೃತ್ಯ. ಕಾಲೇಜು ಕ್ಯಾಂಪಸ್ನಲ್ಲೇ ಹತ್ಯೆಯಾಗಿರುವುದು ನಿಜಕ್ಕೂ ಆತಂಕ ಮೂಡಿಸುತ್ತದೆ.ಸರ್ಕಾರ ಶೀಘ್ರವೇ ಈ ಪ್ರಕರಣವನ್ನು ತ್ವರಿತಗತಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು ಹಾಗೂ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ’ ಎಂದು ಧ್ರುವ ಸರ್ಜಾ ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಧ್ರುವ ಸರ್ಜಾ ಅವರು ನೇಹಾ ಹಿರೇಮಠ್ ಸಾವಿಗೆ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತಿದ್ದಾರೆ.ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ.ಕ್ಯಾಂಪಸ್ ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ.ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು.ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು 🙏 ಜೈ ಆಂಜನೇಯ 🙏 ../z1gkJkEETU