ಹಿರಿಯ ನಟ ಲೋಹಿತಾಶ್ವಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇದನ್ನು ಓದಿ: ಹಿರಿಯ ನಟ ಅನಂತ್ ನಾಗ್ ಗೆ ಬೆಂಗಳೂರು ಉತ್ತರ ವಿ.ವಿಯಿಂದ ಗೌರವ ಡಾಕ್ಟರೇಟ್ ಪದವಿ ಗೌರವಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.