'ಕೆಡಿ' ಕನ್ನಡ ಸಿನಿಮಾ ಶೂಟಿಂಗ್ ವೇಳೆ ಗಾಯಗೊಂಡಿಲ್ಲ: ಸಂಜಯ್ ದತ್ ಬೆಂಗಳೂರಿನಲ್ಲಿ ಕೆಡಿ ಕನ್ನಡ ಚಿತ್ರದ ಚಿತ್ರೀಕರಣದ ವೇಳೆ ನನಗೆ ಯಾವುದೇ ಗಾಯಗಳಾಗಿಲ್ಲ ಎಂದು ಬಾಲಿವುಡ್ ನಟ ಸಂಜಯ್ ದತ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಬುಧವಾರ ಟ್ವಿಟರ್‌ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರು: ಬೆಂಗಳೂರಿನಲ್ಲಿ ಕೆಡಿ ಕನ್ನಡ ಚಿತ್ರದ ಚಿತ್ರೀಕರಣದ ವೇಳೆ ನನಗೆ ಯಾವುದೇ ಗಾಯಗಳಾಗಿಲ್ಲ ಎಂದು ಬಾಲಿವುಡ್ ನಟ ಸಂಜಯ್ ದತ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಬುಧವಾರ ಟ್ವಿಟರ್‌ ವದಂತಿಗಳಿಗೆ ತೆರೆ ಎಳೆದಿದ್ದಾರೆ.“ನಾನು ಗಾಯಗೊಂಡಿರುವ ವರದಿಗಳಿವೆ. ಆದರೆ ಈ ವರದಿಗಳು ಸಂಪೂರ್ಣ ಆಧಾರ ರಹಿತ. ನಾನು ದೇವರ ದಯೆಯಿಂದ ಉತ್ತಮವಾಗಿದ್ದೇನೆ ಮತ್ತು ಆರೋಗ್ಯವಾಗಿದ್ದೇನೆ. ನಾನು ಕೆಡಿ ಚಿತ್ರದ ಚಿತ್ರೀಕರಣದ ವೇಳೆ ಗಾಯಗೊಂಡಿಲ್ಲ. ನನ್ನ ದೃಶ್ಯಗಳನ್ನು ಚಿತ್ರೀಕರಿಸುವಾಗ ಚಿತ್ರ ತಂಡ ಹೆಚ್ಚಿನ ಎಚ್ಚರಿಕೆ ವಹಿಸಿದೆ. ನಿಮ್ಮ ಕಾಳಜಿಗಾಗಿ ಎಲ್ಲರಿಗೂ ಧನ್ಯವಾದಗಳು" ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದಾರೆ.“ಸಂಜಯ್ ದತ್ ಅವರು ಚಿತ್ರದ ಬಾಂಬ್ ಬ್ಲಾಸ್ಟ್ ಸೀಕ್ವೆನ್ಸ್‌ಗಾಗಿ ಚಿತ್ರೀಕರಣ ನಡೆಸುತ್ತಿದ್ದರು. ಶೂಟಿಂಗ್ ಸಮಯದಲ್ಲಿ, ಸ್ಫೋಟ ಸಂಭವಿಸಿದಾಗ, ನಟನ ಕೈ ಮತ್ತು ಕುತ್ತಿಗೆಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಚಿತ್ರದ ತಂಡದ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.ಇದನ್ನು ಓದಿ: ಕನ್ನಡದ 'ಕೆಡಿ' ಸಿನಿಮಾ ಶೂಟಿಂಗ್ ವೇಳೆ ಅವಘಡ; ಬಾಲಿವುಡ್ ನಟ ಸಂಜಯ್ ದತ್‌ಗೆ ಗಾಯಅವರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ಚಿತ್ರತಂಡದ ಸದಸ್ಯರು ತಿಳಿಸಿದ್ದಾರೆ. ಚಿತ್ರೀಕರಣ ಮುಗಿಸಿ ಮಂಗಳವಾರ ಸಂಜೆಯೇ ಅವರು ಮುಂಬೈಗೆ ತೆರಳಿದ್ದಾರೆ. ಮೇ ತಿಂಗಳಿನಲ್ಲಿ ಮತ್ತೆ ಶೂಟಿಂಗ್ ಆರಂಭಿಸಲು ನಗರಕ್ಕೆ ಬರಲಿದ್ದಾರೆ ಎಂದು ಅವರು ಹೇಳಿದ್ದಾರೆ.ಧ್ರುವ ಸರ್ಜಾ ಮತ್ತು ಶಿಲ್ಪಾ ಶೆಟ್ಟಿ ನಟಿಸಿರುವ ಕೆಡಿ ಚಿತ್ರದ ಶೂಟಿಂಗ್‌ಗಾಗಿ ದತ್ ಬೆಂಗಳೂರಿಗೆ ಬಂದಿದ್ದರು. ಚಿತ್ರವನ್ನು ಪ್ರೇಮ್ ನಿರ್ದೇಶಿಸಿದ್ದಾರೆ.