ಲೂಸಿಯಾ ಪವನ್ ಕುಮಾರ್ ನಿರ್ದೇಶನದ ಕನ್ನಡ ಸಿನಿಮಾದಲ್ಲಿ 'ಕೋಬ್ರಾ' ವಿಕ್ರಂ! ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕೋಬ್ರಾ’ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸುತ್ತಿದೆ. ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕೋಬ್ರಾ’ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸುತ್ತಿದೆ.ಲೂಸಿಯಾ, ಯೂಟರ್ನ್‌ ಸಿನಿಮಾ ಖ್ಯಾತಿಯ ಪವನ್‌ ಜತೆಗೆ ಸಿನಿಮಾ ಮಾಡುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಕನ್ನಡದಲ್ಲಿ ಲೂಸಿಯಾ ಪವನ್ ಹೇಳಿದ ಕಥೆ ಇಷ್ಟವಾಗಿದ್ದು ಅವರ ಜೊತೆ ಸಿನಿಮಾ ಮಾಡುತ್ತೇನೆ" ಎಂದು ತಿಳಿಸಿದರು. ಈ ಮೂಲಕ ಚಿಯಾನ್‌ ವಿಕ್ರಂ ಕನ್ನಡಕ್ಕೆ ಆಗಮಿಸಲಿದ್ದಾರೆ. ಬಹುಭಾಷೆಗಳಲ್ಲಿ ಮೂಡಿಬರಲಿದೆ ಈ ಸಿನಿಮಾ ಬಗ್ಗೆ ನಿರ್ಮಾಪಕರು ಶೀಘ್ರದಲ್ಲಿ ಅಧಿಕೃತ ಘೋಷಣೆ ಮಾಡಬೇಕಿದೆ.ವಿಕ್ರಮ್ ನಟನೆಯ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ನಿರ್ಮಾಣವಾಗಲಿದೆ, ಇನ್ನೂ ಪವನ್ ಕುಮಾರ್ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಫಹದ್ ಫಾಸಿಲ್ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂಬ ವಿಷಯ ಕೇಳಿ ಬಂದಿತ್ತು.