'ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಅಧಿಕೃತ ರಿಲೀಸ್ ಡೇಟ್ ಫಿಕ್ಸ್! ಕಳೆದ ಹಲವು ದಿನಗಳಿಂದ ಚಿತ್ರದ ಸೈಡ್ ಬಿ ರಿಲೀಸ್ ಡೇಟ್ನಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದು, ಇದೀಗ ಈ ಕುರಿತಂತೆ ಚಿತ್ರತಂಡ ಅಧಿಕೃತ ದಿನಾಂಕವನ್ನು ಘೋಷಿಸಿದೆ. ಸಿಂಪಲ್ ಸ್ಟಾರ್, ನಟ ರಕ್ಷಿತ್ ಶೆಟ್ಟಿ ಮತ್ತು ನಟಿ ರುಕ್ಮಿಣಿ ವಸಂತ್ ಮುಖ್ಯಭೂಮಿಕೆಯಲ್ಲಿ ನಟಿಸಿದ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಎ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಸಿನಿಪ್ರಿಯರಿಂದ ವ್ಯಾಪಕ ಮೆಚ್ಚುಗೆ ಗಳಿಸಿತು.ಕಳೆದ ಹಲವು ದಿನಗಳಿಂದ ಚಿತ್ರದ ಸೈಡ್ ಬಿ ರಿಲೀಸ್ ಡೇಟ್ನಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದು, ಇದೀಗ ಈ ಕುರಿತಂತೆ ಚಿತ್ರತಂಡ ಅಧಿಕೃತ ದಿನಾಂಕವನ್ನು ಘೋಷಿಸಿದೆ.ಇದನ್ನೂ ಓದಿ: ಸಪ್ತ ಸಾಗರದಾಚೆ ಎಲ್ಲೋ-ಸೈಡ್ ಎ ಚಿತ್ರಕ್ಕೆ ಒಟಿಟಿಯಲ್ಲಿ ಭಾರಿ ಪ್ರತಿಕ್ರಿಯೆ, ಸಂತಸದಲ್ಲಿ ಚಿತ್ರತಂಡಪರಮಾವ್ ಪಿಕ್ಚರ್ಸ್ ನಿರ್ಮಾಣದ, ರಕ್ಷಿತ್ ಶೆಟ್ಟಿ - ರುಕ್ಮಿಣಿ ವಸಂತ್ - ಚೈತ್ರಾ ಆಚಾರ್ ಅಭಿನಯದ, ಹೇಮಂತ್ ಎಂ ರಾವ್ ನಿರ್ದೇಶನದ 'ಸಪ್ತ ಸಾಗರದಾಚೆ ಎಲ್ಲೋ - ’ ಚಿತ್ರ ಇದೇ ನವೆಂಬರ್ 17ಕ್ಕೆ ಕನ್ನಡ ಸೇರಿದಂತೆ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ? - 17th , ,