ಸೋಶಿಯಲ್ ಮೀಡಿಯಾದಲ್ಲಿ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯ ಮಾತು ವಿಷಾದನೀಯ-ನಟಿ ರಮ್ಯಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲಿನ ಚಪ್ಪಲಿ ಎಸೆತ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ ಅಭಿಮಾನಿ ಸಂಘಗಳು, ಅಭಿಮಾನಿ ಬಳಗಗಳ ನಡವಳಿಕೆ ಚಿಂತಾಜನಕ ಎಂದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲಿನ ಚಪ್ಪಲಿ ಎಸೆತ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ ಅಭಿಮಾನಿ ಸಂಘಗಳು, ಅಭಿಮಾನಿ ಬಳಗಗಳ ನಡವಳಿಕೆ ಚಿಂತಾಜನಕ ಎಂದಿದ್ದಾರೆ.ಅಭಿಮಾನಿಗಳ ಹೆಸರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ನಿಜ ರೂಪ, ಹೆಸರನ್ನು ಹಾಕಿಕೊಳ್ಳದೆ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯಲ್ಲಿ ಮಾತನಾಡುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ದರ್ಶನ್ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ, ಅವರ ಮೇಲೆ ಚಪ್ಪಲಿ ಎಸೆದ ಘಟನೆ ನನ್ನ ಮನಸ್ಸಿಗೆ ಘಾಸಿ ಮಾಡಿದೆ: ಕಿಚ್ಚ ಸುದೀಪ್ ಈ ಕುರಿತು ಧೀರ್ಘ ಟ್ವೀಟ್ ಮಾಡಿರುವ ರಮ್ಯಾ, ನಾನು ಯಾವತ್ತಿಗೂ ನಂಬರ್ 1 ಅನ್ನುವ ಅಹಂ ಬಿಟ್ಟು, ಯಾರೇ ಮೇಲೆ ಬಂದರೂ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಅಧಿಕಾರ, ಹಣ ಯಾವತ್ತೂ ಶಾಶ್ವತ ಅಲ್ಲ ಅನ್ನುವ ಸಾಮಾನ್ಯ ಅರಿವು ಎಲ್ಲರಿಗೂ ಇರಬೇಕು,ತಾಯಿ, ಹೆಂಡತಿ, ಮಗಳು ಅನ್ನುವ ಎಲ್ಲ ಪವಿತ್ರ ಸಂಬಂಧಗಳಿಗೆ ಮಸಿ ಬಳಿಯುವಂತಹ ಕೆಟ್ಟ ಮಾತುಗಳನ್ನಾಡುವುದನ್ನು ನೋಡಿ ನೋವಾಗುತ್ತದೆ ಎಂದಿದ್ದಾರೆ. ../ ಇಂತಹ ವರ್ತನೆಯನ್ನು ನಮ್ಮ ನಟರು ಖಂಡಿಸಿ,ತಮ್ಮ ಅಭಿಮಾನಿಗಳಿಗೆ ತಿಳುವಳಿಕೆ ಹೇಳಿ ಅವರನ್ನು ಸುಸಂಕೃತರಾಗಿ ಮಾಡುವ ಜವಾಬ್ದಾರಿ ಹೊರಬೇಕಾಗಿದೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅಭಿಮಾನಿಗಳು ಮಾಡುವ ಸಮಾಜ ವಿರೋಧಿ ಚಟುವಟಿಕೆಗಳಿಗೆ ಬೆಂಬಲ ಕೊಡಬಾರದು ಎಂದು ಹೇಳಿದ್ದಾರೆ.