ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ 'ಬುದ್ಧಿವಂತ 2' ಸೆಪ್ಟೆಂಬರ್ 15ಕ್ಕೆ ಬಿಡುಗಡೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹುನಿರೀಕ್ಷಿತ ಬುದ್ಧಿವಂತ 2 ಚಿತ್ರ ಸೆಪ್ಟೆಂಬರ್ 15ಕ್ಕೆ ಬಿಡುಗಡೆಯಾಗಲಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹುನಿರೀಕ್ಷಿತ ಬುದ್ಧಿವಂತ 2 ಚಿತ್ರ ಸೆಪ್ಟೆಂಬರ್ 15ಕ್ಕೆ ಬಿಡುಗಡೆಯಾಗಲಿದೆ.ವಿಡಿಯೋ ತುಣುಕೊಂದರ(ಗ್ಲಿಮ್ಸ್‌) ಮೂಲಕ ಬುದ್ಧಿವಂತ 2 ಚಿತ್ರತಂಡ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ.ಚಂದನವನದಲ್ಲಿ ತಮ್ಮ ನಿರ್ದೇಶನದ ಸಾಮರ್ಥ್ಯದ ಕಾರಣ ಬುದ್ಧಿವಂತ ಎಂದೇ ಉಪೇಂದ್ರ ಕರೆಯಲ್ಪಡುತ್ತಾರೆ. ‘ಬುದ್ಧಿವಂತ’ ಸಿನಿಮಾ ಮೂಲಕ ಹಲವು ರೂಪದಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದ ಉಪೇಂದ್ರ, ಬುದ್ಧಿವಂತನಾಗಿ ಮತ್ತೆ ಬರುತ್ತಿರುವುದಕ್ಕೆ ಪ್ರೇಕ್ಷಕರು ಕಾಯುತ್ತಿದ್ದಾರೆ.ಸೆ.18 ಉಪೇಂದ್ರ ಅವರ ಜನ್ಮದಿನ. ಈ ಸಂದರ್ಭದಲ್ಲೇ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.ಇದನ್ನೂ ಓದಿ: ಕನಕದಾಸರ ಚರಿತ್ರೆ ಆಧರಿಸಿದ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಟನೆಜೈದೇವ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಗುರುಕಿರಣ್ ಅವರು ಸಂಗೀತ ನೀಡಿದ್ದು, ಎಸ್. ನವೀನ್ ಕುಮಾರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಕೆ.ಎಂ. ಪ್ರಕಾಶ್ ಅವರು ಸಂಕಲನ ಮಾಡಿದ್ದಾರೆ. ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಸಿನಿಮಾಗೆ ಇದೆ.ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿರುವ ಡಾ. ಟಿ.ಆರ್. ಚಂದ್ರಶೇಖರ್ ಅವರು ‘ಕ್ರಿಸ್ಟಲ್ ಪಾರ್ಕ್ ಸಿನಿಮಾಸ್’ ಬ್ಯಾನರ್ ಮೂಲಕ ‘ಬುದ್ಧಿವಂತ 2’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.ಚಿತ್ರದಲ್ಲಿ ಉಪೇಂದ್ರ ಅವರಿಗೆ ನಾಯಕಿಯರಾಗಿ ಸೋನಾಲ್ ಮೊಂಟೆರೊ ಹಾಗೂ ಮೇಘನರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಅವರು ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.