ಚೆಕ್ಬೌನ್ಸ್ ಪ್ರಕರಣ: ನಟ, ನಿರ್ದೇಶಕ ಗುರು ಪ್ರಸಾದ್ ಬಂಧನ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕ ಗುರು ಪ್ರಸಾದ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕ ಗುರು ಪ್ರಸಾದ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.ಶ್ರೀನಿವಾಸ್ ಎಂಬ ವ್ಯಕ್ತಿಗೆ ಗುರು ಪ್ರಸಾದ್ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿದೆ. ಈ ಸಂಬಂಧ ಕೋರ್ಟ್ ಮುಂದೆ ವಿಚಾರಣೆಗೆ ಹಾಜರಾಗದ ಮಠ ಚಿತ್ರದ ನಿರ್ದೇಶಕರ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲಾಗಿತ್ತು.ಇದನ್ನು ಓದಿ: ಬಘೀರ ಚಿತ್ರದ ಶೂಟಿಂಗ್ ವೇಳೆ ಅವಘಡ: ನಟ ಶ್ರೀಮುರಳಿ ಕಾಲಿಗೆ ಗಾಯ, ಶೀರ್ಘದಲ್ಲೇ ಸರ್ಜರಿ!ವಾರಂಟ್ ಪಡೆದ ಗಿರಿನಗರ ಪೊಲೀಸರು ಇಂದು ವಂಚನೆ ಹಾಗೂ ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರು ಪ್ರಸಾದ್ ಅವರನ್ನು ಬಂಧಿಸಿ ಬಂಧಿಸಿದ್ದು, ಕೋರ್ಟ್ ಮುಂದೆ ಹಾಜರು ಪಡಿಸಲಿದ್ದಾರೆ.