ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ; ಮಲ್ಲೇಶ್ವರಂ ನಿವಾಸದಲ್ಲಿ ಸಾರ್ವಜನಿಕ ದರ್ಶನ ಬ್ಯಾಂಕಾಕ್ ನಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮಿಸಿದ್ದು, ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿಕೆ ಶಿವರಾಂ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ತರಲಾಗಿದೆ. ಬೆಂಗಳೂರು: ಬ್ಯಾಂಕಾಕ್ ನಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮಿಸಿದ್ದು, ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿಕೆ ಶಿವರಾಂ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ತರಲಾಗಿದೆ.ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಹೊತ್ತ ವಿಮಾನ ಬೆಂಗಳೂರಿಗೆ ಆಗಮಿಸಿದ್ದು, ಬ್ಯಾಂಕಾಕ್‌ನಿಂದ ಕಾರ್ಗೋ ವಿಮಾನದಲ್ಲಿ ತರಲಾದ ಮೃತದೇಹವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುಮಾರು 30 ನಿಮಿಷಗಳ ಕಸ್ಟಮ್ಸ್‌ ಕ್ಲಿಯರೆನ್ಸ್‌ ಪ್ರಕ್ರಿಯೆ ಮುಗಿಸಿದ ಬಳಿಕ ಪಾರ್ಥಿವ ಶರೀರವನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.ಇದನ್ನೂ ಓದಿ: ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಮಲ್ಲೇಶ್ವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆಸ್ಪಂದನಾ ಅವರ ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್‌, ಶಾಸಕ ಮುನಿರತ್ನ, ಮಾವ ಚಿನ್ನೇಗೌಡ, ನಟ ಶ್ರೀಮುರಳಿ, ಸ್ಪಂದನಾ ಸಹೋದರ ರಕ್ಷಿತ್ ಸೇರಿದಂತೆ ಹಲವರು ಸ್ಥಳದಲ್ಲಿದ್ದು ಮೃತದೇಹವನ್ನು ಪಡೆದುಕೊಂಡು ವಿಜಯ್ ರಾಘವೇಂದ್ರ ಅವರನ್ನು ಕಾರಿನಲ್ಲಿ ಮನೆಗೆ ಕರೆದೊಯ್ದರು. ವಿಮಾನ ನಿಲ್ದಾಣದಲ್ಲಿ ಪ್ರಕ್ರಿಯೆ ಮುಗಿಸಿ ಮಲ್ಲೇಶ್ವರಂಗೆ ಮೃತದೇಹ ರವಾನೆ ಮಾಡಲಾಯಿತು. ಸ್ಪಂದನಾ ಅಂತಿಮ ದರ್ಶನಕ್ಕಾಗಿ ಮಲ್ಲೇಶ್ವರಂ ನಲ್ಲಿರುವ ಬಿಕೆ ಶಿವರಾಂ ಅವರ ಮನೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ.ಸ್ಪಂದನಾ ಅವರ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂ ಸ್ಪಂದನಾ ನಿವಾಸದ ಮುಂಭಾಗ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ, ಮಾವ ಚಿನ್ನೇಗೌಡ ನೇತೃತ್ವದಲ್ಲಿ ಅಂತಿಮ ದರ್ಶನಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ವಿಜಯ ರಾಘವೇಂದ್ರ ಕುಟುಂಬ ಕೂಡ ಸ್ಪಂದನಾ ಅವರ ತವರು ಮನೆಗೆ ಆಗಮಿಸಿದೆ. ಬುಧವಾರ ಅಂದರೆ ನಾಳೆ ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಪಾರ್ಥಿವ ಶರೀರವನ್ನ ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ ನಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು. ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಇದನ್ನೂ ಓದಿ: ಹೃದಯಾಘಾತದಿಂದ ಸ್ಪಂದನಾ ವಿಜಯ್ ರಾಘವೇಂದ್ರ ನಿಧನ: ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರ ಸಂತಾಪಸ್ಪಂದನಾ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಾದಿದ್ದಾರೆ. ಆಗಸ್ಟ್ 9ರಂದು ಅಂತ್ಯಕ್ರಿಯೆ ನಡೆಯಲಿದೆ.ಕುಟುಂಬದವರ ಜೊತೆ ವಿದೇಶಕ್ಕೆ ತೆರಳಿದ್ದ ಸ್ಪಂದನಾ ವಿಜಯ್ ರಾಘವೇಂದ್ರ ( ) ಅವರು ಅಲ್ಲಿಯೇ ಹೃದಯಾಘಾತದಿಂದ ಮೃತರಾದರು. ನಟ ವಿಜಯ್ ರಾಘವೇಂದ್ರ ( ) ಅವರ ಪತ್ನಿ ಸ್ಪಂದನಾ ನಿಧನರಾಗಿ ಎರಡು ದಿನ ಕಳೆದಿದೆ. ಬ್ಯಾಂಕಾಕ್ನಲ್ಲಿ ಆಗಸ್ಟ್ 6ರಂದು ಅವರು ಹೃದಯಾಘಾತಕ್ಕೆ ತುತ್ತಾಗಿ ಕೊನೆಯುಸಿರೆಳೆದರು. ವಿದೇಶದಲ್ಲಿ ನಿಧನರಾದ್ದರಿಂದ ಅಲ್ಲಿನ ಹಲವು ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಯಿತು.