13 ವರ್ಷಗಳ ನಂತರ ದೆಹಲಿಗೆ ಕಿಚ್ಚ ಸುದೀಪ್: ಕೇಂದ್ರ ಸಚಿವ ಜೋಶಿ ಭೇಟಿ, ಹಲವು ವಿಷಯಗಳ ಬಗ್ಗೆ ಚರ್ಚೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ನಟ ಸುದೀಪ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ನಟ ಸುದೀಪ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.ಇದೇ ತಿಂಗಳು ಅಂದರೆ ಜುಲೈ 28 ರಂದು ಗುರುವಾರ ನಟ ಸುದೀಪ್ ಅವರ ಚಿತ್ರ ವಿಕ್ರಾಂತ್ ರೋಣ ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿರುವ ಕಿಚ್ಚ ಸುದೀಪ್ ಇಂದು ದೆಹಲಿ ಪ್ರವಾಸ ಕೈಗೊಂಡಿದ್ದಾರೆ.ಬೆಳಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸಕ್ಕೆ ಆಗಮಿಸಿದ ಸುದೀಪ್, ಬಿಜೆಪಿ ನಾಯಕರೊಂದಿಗೆ ಉಪಹಾರ ಸೇವಿಸಿದರು ಎಂದು ಮೂಲಗಳು ತಿಳಿಸಿವೆ. ಬಳಿಕ ದೆಹಲಿಯ ಅಭಿಮಾನಿಗಳ ಕಾತುರಕ್ಕೆ ಕಾರಣವಾಗಿರುವ ವಿಕ್ರಾಂತ ರೋಣ ಚಿತ್ರದ ಪ್ರಚಾರದಲ್ಲಿ ತೊಡಗಿದರೆಂದು ತಿಳಿದುಬಂದಿದೆ.ಪ್ರಲ್ಹಾದ ಜೋಶಿ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದು. “ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.ಇದನ್ನೂ ಓದಿ: ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ವಿದೇಶದಲ್ಲಿಯೇ 1,200 ಸ್ಕ್ರೀನ್ ಗಳ ಗುರಿ!13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡುತ್ತಿರುವ ಸುದೀಪ್ ಅವರು, ಕಲೆ ಸಂಸ್ಕೃತಿ ಮತ್ತು ಸಾಮಾಜಿಕ‌ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು ಎಂದು ಟ್ವೀಟ್ ಮಾಡಿದ್ದಾರೆ. ಬಹುಭಾಷಾ ನಟರಾಗಿ ಮಿಂಚುತ್ತಿರುವ ಅವರ ಯಶಸ್ಸು ಸಿನಿಮಾ ರಂಗದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ಚಿತ್ರನಟ @ ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. 13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡುತ್ತಿರುವ ಸುದೀಪ್ ಅವರು, ಕಲೆ ಸಂಸ್ಕೃತಿ ಮತ್ತು ಸಾಮಾಜಿಕ‌ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ../