ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ನಟನೆಯ 'ಸಲಾರ್' ಜಪಾನ್‌ನಲ್ಲಿ ಬಿಡುಗಡೆ ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್: ಭಾಗ 1 - ಕದನ ವಿರಾಮ' ಚಿತ್ರವು ಇದೀಗ ಜಪಾನಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಮುಖ್ಯಭೂಮಿಕೆಯಲ್ಲಿರುವ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ್ದು, ಜುಲೈ 5 ರಂದು ಜಪಾನ್‌ನಲ್ಲಿ ಬಿಡುಗಡೆಯಾಗಲಿದೆ. ನವದೆಹಲಿ: ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್: ಭಾಗ 1 - ಕದನ ವಿರಾಮ' ಚಿತ್ರವು ಇದೀಗ ಜಪಾನಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಮುಖ್ಯಭೂಮಿಕೆಯಲ್ಲಿರುವ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ್ದು, ಜುಲೈ 5 ರಂದು ಜಪಾನ್‌ನಲ್ಲಿ ಬಿಡುಗಡೆಯಾಗಲಿದೆ.ಪ್ರೊಡಕ್ಷನ್ ಹೌಸ್ ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ 'ಸಲಾರ್: ಭಾಗ 1 ಕದನ ವಿರಾಮ' ಚಿತ್ರದ ಜಪಾನ್‌ನಲ್ಲಿನ ಬಿಡುಗಡೆಯ ಕುರಿತು ವಿವರಗಳನ್ನು ಹಂಚಿಕೊಂಡಿದೆ.'ಭಾರತೀಯ ಆಕ್ಷನ್ ಎಂಟರ್‌ಟೈನರ್ 'ಸಲಾರ್' ಜುಲೈ 5 ರಂದು ಜಪಾನಿನ ಪ್ರೇಕ್ಷಕರನ್ನು ರಂಜಿಸಲಿದೆ! # # ' ಎಂದು ಪೋಸ್ಟ್‌ನಲ್ಲಿ ಹೇಳಿದೆ. (@)'ಸಲಾರ್: ಭಾಗ 1 - ಕದನ ವಿರಾಮ' ಚಿತ್ರವು ಡಿಸೆಂಬರ್ 22 ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ದೇಶದಾದ್ಯಂತ ಬಿಡುಗಡೆಯಾಗಿತ್ತು. ಇದು ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಸುಮಾರು 700 ಕೋಟಿ ರೂ. ಗಳಿಕೆ ಕಂಡಿತ್ತು.ಕಾಲ್ಪನಿಕ ನಗರವಾದ ಖಾನ್‌ಸಾರ್‌ನಲ್ಲಿ ನಡೆಯುವ ಈ ಚಿತ್ರವು ದೇವ (ಪ್ರಭಾಸ್) ಮತ್ತು ವರ್ಧ (ಪೃಥ್ವಿರಾಜ್) ಎಂಬ ಇಬ್ಬರು ಸ್ನೇಹಿತರ ಸುತ್ತ ಸುತ್ತುತ್ತದೆ. ಚಿತ್ರದಲ್ಲಿ ಶ್ರುತಿ ಹಾಸನ್, ಈಶ್ವರಿ ರಾವ್, ಜಗಪತಿ ಬಾಬು ಮತ್ತು ಶ್ರೀಯಾ ರೆಡ್ಡಿ ಕೂಡ ನಟಿಸಿದ್ದಾರೆ.ನಟ ರಕ್ಷಿತ್ ಶೆಟ್ಟಿ ಅಭಿನಯದ ರಾಷ್ಟ್ರ ಪ್ರಶಸ್ತಿ ವಿಜೇತ ಕನ್ನಡ ಚಿತ್ರ '777 ಚಾರ್ಲಿ' ಕೂಡ ಜೂನ್ 28 ರಂದು ಜಪಾನ್‌ನಲ್ಲಿ ಬಿಡುಗಡೆಯಾಗಲಿದೆ.