ನಟಿ ಅದಿತಿ ಪ್ರಭುದೇವ- ಯಶಸ್ ಅದ್ಧೂರಿ ವಿವಾಹ; ದಾಂಪತ್ಯ ಜೀವನಕ್ಕೆ ಪ್ರವೇಶ! ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ ಇಂದು ಯಶಸ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ ಇಂದು ಯಶಸ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ ನ ಗಾಯತ್ರಿ ವಿಹಾರ ಗ್ರ್ಯಾಂಡ್ ನಲ್ಲಿ ಮದುವೆ ಶಾಸ್ತ್ರ ಅದ್ಧೂರಿಯಾಗಿ ನಡೆಯಿತು. ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಹಾಗೂ ಗೆಳೆಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ ಮುಹೂರ್ತ 9.30 ರಿಂದ 10.32ರ ಶುಭ ಲಗ್ನದಲ್ಲಿ ಅದಿತಿ ಪ್ರಭುದೇವ-ಯಶಸ್ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದನ್ನೂ ಓದಿ: ನಟಿ ಅದಿತಿ ಪ್ರಭುದೇವ ಆರತಕ್ಷತೆಯಲ್ಲಿ ಲಹರಿ ವೇಲು ಅಸ್ವಸ್ಥ; ಆಸ್ಪತ್ರೆಗೆ ದಾಖಲುನಿನ್ನೆ ಜೋಡಿಯ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ರಾಜಕೀಯ ಕ್ಷೇತ್ರದ ಹಲವು ಗಣ್ಯರು. ನಟ ಯಶ್, ರಾಧಿಕಾ ಪಂಡಿತ್, ಶ್ರೀನಗರ ಕಿಟ್ಟಿ ಸೇರಿದಂತೆ ಹಲವು ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. ಫೋಟೋ ಗ್ಯಾಲರಿ: ನಟಿ ಅದಿತಿ ಮನೆಯಲ್ಲಿ ಮದುವೆ ಸಂಭ್ರಮ: ಅರಿಶಿನದಲ್ಲಿ ಮಿಂದೆದ್ದ 'ಶ್ಯಾನೆ ಟಾಪ್' ಹುಡುಗಿ!ಮದುವೆ ಖುಷಿಯಲ್ಲಿರುವ ಅದಿತಿ ನಟನೆಯ ತ್ರಿಬಲ್ ರೈಡಿಂಗ್ ಚಿತ್ರ ಬಿಡುಗಡೆಯಾಗಿದ್ದು ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.