ನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆ: ತಕ್ಷಣ ವಿಚಾರಣೆಗೆ ಹಾಜರಾಗಲು ನೋಟಿಸ್ ನಟ ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ. ಬೆಂಗಳೂರು: ನಟ ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ.ಪ್ರಕರಣ ಸಂಬಂಧ ತಕ್ಷಣ ವಿಚಾರಣೆಗೆ ಹಾಜರಾಗುವಂತೆ ಉಪೇಂದ್ರ ಅವರಿಗೆ ಸೂಚಿಸಲಾಗಿದೆ. ನಟನ ಕತ್ರಿಗುಪ್ಪೆ ಮತ್ತು ಸದಾಶಿವನಗರ ಮನೆಗೆ ;ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ನೋಟಿಸ್ ನೀಡಿದ್ದಾರೆ. ಸದ್ಯ ವಾಟ್ಸ್ಆ್ಯಪ್ ಮೂಲಕ ನೋಟಿಸ್ ರವಾನೆ ಮಾಡಲಾಗಿದೆ. ಪ್ರಕರಣ ಸಂಬಂಧ ಸ್ಥಳ‌ ಮಹಜರು ನಡೆಯಲಿದೆ. ವಿಡಿಯೋ ಮಾಡಿದ ಜಾಗದ ಸ್ಥಳ ಮಹಜರನ್ನು ಪೊಲೀಸರು ಮಾಡಲಿದ್ದಾರೆ. ದೂರುದಾರ ಸಮ್ಮುಖದಲ್ಲೇ ಈ ಪ್ರಕ್ರಿಯೆ ನಡೆಯಲಿದೆ.ಇದನ್ನೂ ಓದಿ: ಗಾದೆ ಮಾತು ತಂದ ಕುತ್ತು: ನಟ ಉಪೇಂದ್ರ ವಿರುದ್ಧ ಎರಡನೇ ಎಫ್ ಐಆರ್ ದಾಖಲು!ತಪ್ಪಿನ ಅರಿವಾದ ಬಳಿಕ ಉಪೇಂದ್ರ ಕ್ಷಮೆ ಕೇಳಿದ್ದರು. ಆದರೆ, ಈ ತಪ್ಪನ್ನು ಕೆಲವರು ಮನ್ನಿಸಿಲ್ಲ. ಅವರ ವಿರುದ್ಧ ಕೆಲವರು ಕಾನೂನು ಸಮರ ಸಾರಿದ್ದಾರೆ. ಇದರಿಂದ ನಟನಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.ಇತ್ತೀಚೆಗೆ ಲೈವ್ನಲ್ಲಿ ಮಾತನಾಡಿದ್ದ ಉಪೇಂದ್ರ ಅವರು ಹೊಲಗೇರಿ ಶಬ್ದ ಬಳಕೆ ಮಾಡಿದ್ದರು. ಆಕ್ಷೇಪಾರ್ಹ ಪದ ಬಳಕೆ ಪ್ರಕರಣದಲ್ಲಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.