ಕಿಚ್ಚನ ಹೊಸ ಚಿತ್ರ ಅನೌನ್ಸ್: ಮಾಹಿತಿ ಹಂಚಿಕೊಂಡ ನಟ ವಿಕ್ರಾಂತ್ ರೋಣದಲ್ಲಿ ನಾಯಕರಾಗಿ ಕಾಣಿಸಿಕೊಂಡ ನಂತರ ಕಿಚ್ಚ ಸುದೀಪ್ ಕೆಲ ಸಮಯ ನಟನೆಯಿಂದ ದೂರ ಉಳಿದಿದ್ದರು. ಇತ್ತೀಚೆಗೆ ಮೂರು ಚಿತ್ರಗಳನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದರು. ಈ ಮಧ್ಯೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ವಿಕ್ರಾಂತ್ ರೋಣದಲ್ಲಿ ನಾಯಕರಾಗಿ ಕಾಣಿಸಿಕೊಂಡ ನಂತರ ಕಿಚ್ಚ ಸುದೀಪ್ ಕೆಲ ಸಮಯ ನಟನೆಯಿಂದ ದೂರ ಉಳಿದಿದ್ದರು. ಇತ್ತೀಚೆಗೆ ಮೂರು ಚಿತ್ರಗಳನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದರು. ಈ ಮಧ್ಯೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ.ಇದೀಗ ತಮ್ಮ ಹೊಸ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ. ಮೇ 22ರಂದು ಮೊದಲ ಸಿನಿಮಾದ ಪ್ರೊಮೋ () ಶೂಟ್ ಹಾಗೂ ಜೂನ್ 1 ರಂದು ಆ ಸಿನಿಮಾವನ್ನು ಲಾಂಚ್ ಮಾಡುವುದಾಗಿ ಬರೆದುಕೊಂಡಿದ್ದಾರೆ. ಚಿತ್ರದ ಸ್ಕ್ರಿಪ್ಟ್ ಬಹಳ ಚೆನ್ನಾಗಿದ್ದು ಅಭಿನಯಿಸಲು ಕಾತರನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ' 22nd . 1st . ' .ಸದ್ಯ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರು ಸೂಚಿಸಿರುವ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದು, ಹೋದಲ್ಲೆಲ್ಲಾ ಅಪಾರ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ.