'ಬೆಟ್ಟದ ಹೂವು' ಖ್ಯಾತಿಯ ಪೋಷಕ ನಟ, ಹಿರಿಯ ಕಲಾವಿದ 'ಶಂಖನಾದ' ಅರವಿಂದ್ ಕೊರೋನಾಗೆ ಬಲಿ "ಬೆಟ್ಟದ ಹೂವು" ಖ್ಯಾತಿಯ ಹಿರಿಯ ಕಲಾವಿದ ಶಂಖನಾದ ಅರವಿಂದ್ (70) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. "ಬೆಟ್ಟದ ಹೂವು" ಖ್ಯಾತಿಯ ಹಿರಿಯ ಕಲಾವಿದ ಶಂಖನಾದ ಅರವಿಂದ್ (70 ) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.13 ದಿನಗಳ ಹಿಂದೆ ಕೊರೊನಾ ಸೊಂಕಿಗೆ ತುತ್ತಾಗಿ ವಿಕ್ಟೊರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಅರವಿಂದ್ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 1 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.250 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ಕಲಾವಿದ ಅರವಿಂದ್ ಮೃತಪಟ್ಟಿರುವ ಬಗ್ಗೆ ಅವರ ಪುತ್ರಿ ಮಾನಸ ಹೊಳ್ಳ ತಮ್ಮ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ. "ಸತತ 13 ದಿನಗಳು ಆಸ್ಪತ್ರೆಯಲ್ಲಿ ಹೋರಾಟ ನಡೆಸಿ ಇಂದು 1 ಘಂಟೆಗೆ ದೈವದೀನರಾಗಿದ್ದಾರೆಂದು ತಿಳಿಸಲು ವಿಶಾದಿಸುತ್ತೇನೆ ನಮ್ಮ ತಂದೆಯವರು " ಎಂದು ಅವರು ಬರೆದುಕೊಂಡಿದ್ದಾರೆ.ಮೃತರು ಮೂವರು ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ,