ಅಪಘಾತ ಪ್ರಕರಣ: ನಟ ನಾಗಭೂಷಣ್ ವಿರುದ್ಧ 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ನಟ ನಾಗಭೂಷಣ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಪಘಾತ ಪ್ರಕರಣದಲ್ಲಿ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಬೆಂಗಳೂರು: ನಟ ನಾಗಭೂಷಣ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಪಘಾತ ಪ್ರಕರಣದಲ್ಲಿ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ.ಅಕ್ಟೋಬರ್ 30ರಂದು ಬೆಂಗಳೂರಿನ ಕೋಣನ ಕುಂಟೆ ಸಮೀಪ ಅಪಘಾತ ಸಂಭವಿಸಿತ್ತು. ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತಪಟ್ಟರೆ, ಅವರ ಪತಿ ಕೃಷ್ಣ ಅವರಿಗೆ ಗಂಭೀರ ಗಾಯವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚೇತರಿಕೆ ಕಂಡಿದ್ದು, ಅವರು ಹೇಳಿಕೆ ದಾಖಲು ಮಾಡಿದ್ದಾರೆ.ಆ್ಯಕ್ಸಿಡೆಂಟ್ ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಪೊಲೀಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 60 ಸಾಕ್ಷಿಗಳನ್ನು ಕಲೆಹಾಕಲಾಗಿದೆ. ಸಿಸಿಟಿವಿ ಮಾತ್ರವಲ್ಲದೆ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.ಇದನ್ನೂ ಓದಿ: ಆಕ್ಸಿಡೆಂಟ್ ಆದ ನಂತರ ಮಾನಸಿಕವಾಗಿ ಕುಸಿದಿದ್ದೇನೆ; ನನಗೆ ಅವರ ನೋವು ಅರ್ಥವಾಗುತ್ತದೆ: ನಟ ನಾಗಭೂಷಣ್ಪ್ರೇಮಾ ಹಾಗೂ ಕೃಷ್ಣ ಅವರು ಪಾದಾಚಾರಿ ಮಾರ್ಗದಿಂದ ನೇರ ರಸ್ತೆಗೆ ಇಳಿದಿದ್ದರು ಎಂದು ಹೇಳಿಕೆ ನೀಡಿದ್ದರು. ಏಕಾಏಕಿ ಕಾರಿಗೆ ಅಡ್ಡಲಾಗಿ ಬಂದ ಕಾರಣ ಕಾರ್ ಕಂಟ್ರೋಲ್ ಸಿಗದೆ ಆ್ಯಕ್ಸಿಡೆಂಟ್ ಅಗಿದೆ ಎಂದು ನಾಗಭೂಷಣ್ ಹೇಳಿಕೆ ನೀಡಿದ್ದರು. ಆದರೆ, ಕೃಷ್ಣ ಅವರ ಹೇಳಿಕೆಯಲ್ಲಿ ಎಲ್ಲವೂ ಉಲ್ಟಾ ಆಗಿದೆ.ವೇಗವಾಗಿ ಬಂದ ಕಾರು ಫುಟ್ಪಾತ್‌ ಮೇಲೆ ಹೋಗುತಿದ್ದ ನಾನು ಮತ್ತ ನನ್ನ ಪತ್ನಿ ಪ್ರೇಮ ಅವರಿಗೆ‌ ಡಿಕ್ಕಿ ಯಾಗಿತ್ತು ಎಂದು ಕೃಷ್ಣ ಹೇಳಿಕೆ ನೀಡಿದ್ದಾರೆ.