ಸರ್ಕಾರದ ‘ಪುಣ್ಯಕೋಟಿ’ ಯೋಜನೆಗೆ ಸುದೀಪ್ ರಾಯಭಾರಿ: ಸಂಭಾವನೆ ಪಡೆಯದ ಕಿಚ್ಚ! ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಗೋಶಾಲೆಯಲ್ಲಿ ರಕ್ಷಿಸಲ್ಪಟ್ಟ ಅನಾಥ ಗೋವುಗಳ ಪಾಲನೆ - ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ಜಾರಿಮಾಡಲಾದ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ "ಪುಣ್ಯಕೋಟಿ ಯೋಜನೆ"ಯ ರಾಯಭಾರಿಯಾದ ಸುಪ್ರಸಿದ್ಧ ನಟ, ಅಭಿನಯ ಚಕ್ರವರ್ತಿ ಶ್ರೀ ಕಿಚ್ಚ ಸುದೀಪ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ../uNkHetZOrVಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.ಈ ಹಿಂದೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಟ ಸುದೀಪ್‌ ಅವರಿಗೆ ಪತ್ರ ಬರೆದು, ಪುಣ್ಯಕೋಟಿ ರಾಯಭಾರಿಯಾಗುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್‌ ಪಶು ಸಂಗೋಪನೆ ಇಲಾಖೆಯ ರಾಯಭಾರಿ ಕೆಲಸ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ.ಗೋ ಸಂಪತ್ತಿನ ರಕ್ಷಣೆಯ ಪುಣ್ಯಕಾರ್ಯಕ್ಕೆ ಕೈಜೋಡಿಸಿರುವ ಅವರಿಗೆ ಪುಣ್ಯಕೋಟಿಯ ಆಶೀರ್ವಾದ ಸದಾ ಇರಲಿ ಎಂದು ಹಾರೈಸುವೆ.#ಪುಣ್ಯಕೋಟಿ | # | @