: ನಟಿ ಅದಿತಿ ಪ್ರಭುದೇವ ದಂಪತಿಗೆ 'ಮಹಾಲಕ್ಷ್ಮಿ' ಜನನ! ಇತ್ತೀಚೆಗಷ್ಟೇ ಸೀಮಂತ ಕಾರ್ಯಕ್ರಮದ ಮೂಲಕ ಗಮನ ಸೆಳೆದಿದ್ದ ನಟಿ ಅದಿತಿ ಪ್ರಭುದೇವ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರು: ಇತ್ತೀಚೆಗಷ್ಟೇ ಸೀಮಂತ ಕಾರ್ಯಕ್ರಮದ ಮೂಲಕ ಗಮನ ಸೆಳೆದಿದ್ದ ನಟಿ ಅದಿತಿ ಪ್ರಭುದೇವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸುದ್ದಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ಮಗುವಿನ ಕೈಯನ್ನು ತಾವು ಹಾಗೂ ತಮ್ಮ ಪತಿ ಯಶಸ್ ಪಟ್ಲ ಹಿಡಿದುಕೊಂಡಿರುವ ಚಿತ್ರವನ್ನು ಅಪ್ಲೋಡ್ ಮಾಡಿದ್ದು, 'ನಮ್ಮನೆ ಮಹಾಲಕ್ಷ್ಮಿ.. ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.ಇನ್ನು ಮಗುವಿಗೆ ಜನ್ಮ ನೀಡಿದ ನಟಿ ಅದಿತಿಗೆ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದು, ಪುಟ್ಟ 'ಮಹಾಲಕ್ಷ್ಮಿ'ಗೆ ಶುಭ ಕೋರಿದ್ದಾರೆ. (@)