ವರದಕ್ಷಿಣಿ ಕಿರುಕುಳ ಪ್ರಕರಣ: ನಟಿ ಅಭಿನಯ ಬಂಧನಕ್ಕಾಗಿ ಲುಕ್ ಔಟ್ ನೋಟಿಸ್ ಅತ್ತಿಗೆಗೆ ವರದಕ್ಷಿಣಿ ಕಿರುಕುಳ ನೀಡಿದ ಪ್ರಕರಣದಲ್ಲಿ ಖ್ಯಾತ ನಟಿ ಅಭಿನಯ ಅವರ ಬಂಧನಕ್ಕಾಗಿ ಚಂದ್ರಾ ಲೇಔಟ್ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಬೆಂಗಳೂರು: ಅತ್ತಿಗೆಗೆ ವರದಕ್ಷಿಣಿ ಕಿರುಕುಳ ನೀಡಿದ ಪ್ರಕರಣದಲ್ಲಿ ಖ್ಯಾತ ನಟಿ ಅಭಿನಯ ಅವರ ಬಂಧನಕ್ಕಾಗಿ ಚಂದ್ರಾ ಲೇಔಟ್ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಜೈಲು ಶಿಕ್ಷೆ ಪ್ರಕಟ ಬಳಿಕ ತಲೆ ಮರೆಸಿಕೊಂಡಿರುವ ಅಭಿನಯ ಹಾಗೂ ಅವರ ತಾಯಿ ಜಯಮ್ಮ ಹಾಗೂ ಸಹೋದರ ಚೆಲುವರಾಜು ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ. ಅಭಿನಯ ಅವರ ಅತ್ತಿಗೆ ಲಕ್ಷ್ಮೀದೇವಿ ಅವರು ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಅಭಿನಯ ಅವರು ಹೈಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ, ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ , ಅಭಿನಯ ಅವರ ತಾಯಿ ಜಯಮ್ಮಗೆ 5 ವರ್ಷ, ಅಭಿನಯ ಹಾಗೂ ಅವರ ಸಹೋದರ ಚೆಲುವರಾಜ್ಗೆ 2 ವರ್ಷ ಶಿಕ್ಷೆ ನೀಡಲಾಗಿತ್ತು.ಇದನ್ನೂ ಓದಿ: ಅನುಭವ' ಸಿನಿಮಾ ಖ್ಯಾತಿಯ ನಟಿ ಅಭಿನಯ ಜೈಲು ಪಾಲು? 2 ವರ್ಷ ಶಿಕ್ಷೆ ವಿಧಿಸಿದ ಹೈಕೋರ್ಟ್ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿ ಕೋರ್ಟಿಗೆ ಹಾಜರು ಪಡಿಸಬೇಕಿತ್ತು. ಆದರೆ ಆರೋಪಿಗಳು ಕೈಗೆ ಸಿಗದೆ ತಲೆಮರೆಸಿಕೊಂಡಿದ್ದು, ಪೊಲೀಸರು ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ನಟಿ ಅಭಿನಯ 1983ರಲ್ಲಿ ಖ್ಯಾತ ನಿರ್ದೇಶಕ ಕಾಶಿನಾಥ್ ಅವರ ಸೂಪರ್ ಹಿಟ್ ಚಿತ್ರ `ಅನುಭವ' ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಕೆಲ ಕಾಲ ಚಿತ್ರರಂಗದಿಂದ ದೂರವಾಗಿದ್ದ ಇವರು, ಮತ್ತೆ ಹಿಟ್ಲರ್ ಕಲ್ಯಾಣ ಮತ್ತಿತರ ಜನಪ್ರಿಯ ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದರು. ಇದೀಗ ಮತ್ತೆ ಧಾರವಾಹಿಯಿಂದಲೂ ಔಟ್ ಆಗಿದ್ದಾರೆ.