ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಮುಂದಿನ ವರ್ಷ ಆಗಸ್ಟ್ 15 ರಂದು ಬಿಡುಗಡೆ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2: ದಿ ರೂಲ್ ಮುಂದಿನ ವರ್ಷ ಆಗಸ್ಟ್ 15 ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕರು ಸೋಮವಾರ ಘೋಷಿಸಿದ್ದಾರೆ. ಹೈದರಾಬಾದ್: ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2: ದಿ ರೂಲ್ ಮುಂದಿನ ವರ್ಷ ಆಗಸ್ಟ್ 15 ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕರು ಸೋಮವಾರ ಘೋಷಿಸಿದ್ದಾರೆ.ಚಿತ್ರ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್’ ಟ್ವೀಟ್ ಮೂಲಕ ಪುಷ್ಪ 2 ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.‘ದಿನಾಂಕವನ್ನು ಗುರುತು ಮಾಡಿಕೊಳ್ಳಿ. ವಿಶ್ವಾದ್ಯಂತ 2024ರ ಆಗಸ್ಟ್ 15ರಂದು ‘ಪುಷ್ಪ 2’ ಸಿನಿಮಾ ರಿಲೀಸ್ ಆಗಲಿದೆ. ಗಲ್ಲಾಪೆಟ್ಟಿಗೆಯನ್ನು ವಶಪಡಿಸಿಕೊಳ್ಳಲು ಪುಷ್ಪರಾಜ್ ಮತ್ತೆ ಬರುತ್ತಿದ್ದಾನೆ’ ಎಂಬ ಕ್ಯಾಪ್ಷನ್ ಜೊತೆಗೆ ಹೊಸ ಪೋಸ್ಟ್ ಹಂಚಿಕೊಳ್ಳಲಾಗಿದೆ. ಆ ಮೂಲಕ ‘ಪುಷ್ಪ 2’ ಸಿನಿಮಾದ ರಿಲೀಸ್ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.ಇದನ್ನು ಓದಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅಲ್ಲು ಅರ್ಜುನ್ ಅತ್ಯುತ್ತಮ ನಟ, ‘ಚಾರ್ಲಿ 777’ ಅತ್ಯುತ್ತಮ ಪ್ರಾದೇಶಿಕ ಚಿತ್ರಸುಕುಮಾರ್ ನಿರ್ದೇಶನದ, ಪುಷ್ಪ 2: ದಿ ರೂಲ್ ಚಿತ್ರ ಮುಂದಿನ ವರ್ಷ ಆಗಸ್ಟ್ 15, ಸ್ವಾತಂತ್ರ್ಯ ದಿನಾಚರಣೆ ದಿನ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ಅಲ್ಲು ಅರ್ಜುನ್ ಸಹ ಟ್ವೀಟ್ ಮಾಡಿದ್ದಾರೆ.ಅದ್ದೂರಿ ಬಜೆಟ್ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಡಾಲಿ ಧನಂಜಯ್, ಫಹಾದ್ ಫಾಸಿಲ್ ಮುಂತಾದ ಕಲಾವಿದರು ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. 15th 2024 - #Pushpa2TheRule @ @ @ # @ @ @ ../LWbMbk3K5c