'ಮಾಫಿಯಾ" ಚಿತ್ರದಲ್ಲಿ ಪೊಲೀಸ್ ಆಗಿ ಶೈನ್ ಶೆಟ್ಟಿ ಎಂಟ್ರಿ! ಲೋಹಿತ್ ನಿರ್ದೇಶನದ, ಪ್ರಜ್ವಲ್‌ ದೇವರಾಜ್‌ ಅಭಿನಯದ ‘ಮಾಫಿಯಾ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಚಿತ್ರದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 7 ರ ವಿಜೇತ ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲೋಹಿತ್ ನಿರ್ದೇಶನದ, ಪ್ರಜ್ವಲ್‌ ದೇವರಾಜ್‌ ಅಭಿನಯದ ‘ಮಾಫಿಯಾ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಚಿತ್ರದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 7 ರ ವಿಜೇತ ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಚಿತ್ರದಲ್ಲಿ ಶೈನ್‌ ಶೆಟ್ಟಿ ಅವರು ಪ್ರಜ್ವಲ್‌ ದೇವರಾಜ್‌ ಅವರ ಸ್ನೇಹಿತನ ಪಾತ್ರದಲ್ಲಿ ನಟಿಸುತ್ತಿದ್ದು, ಪೊಲೀಸ್ ಪಾತ್ರದಲ್ಲಿಯೇ ಇವರೂ ಕಾಣಿಸಿಕೊಳ್ಳುತ್ತಿದ್ದಾರೆ.ಚಿತ್ರದಲ್ಲಿ ಪ್ರಜ್ವಲ್ ದೇವಾರಾಜ್ ಪೊಲೀಸ್ ಅಧಿಕಾರಿಯಾಗಿದ್ದು, ಶೈನ್ ಶೆಟ್ಟಿ ಕೂಡ ಪೊಲೀಸ್ ಪಾತ್ರದಲ್ಲಿಯೇ ಕಾಣಿಸಿಕೊಳ್ಳುತ್ತಾರೆ. 25 ದಿನಗಳ ಚಿತ್ರೀಕರಣ ಪೂರ್ಣಗೊಂಡಿದ್ದು, ಜೂನ್.16ರಿಂದ ಮುಂದಿನ ಭಾಗದ ಚಿತ್ರೀಕರಣ ಪುನರಾರಂಭಗೊಳ್ಳಲಿದೆ. 34 ದಿನಗಳಲ್ಲಿ ಈ ಚಿತ್ರೀಕರಣ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿ ಚಿತ್ರದ ಚಿತ್ರೀಕರಣ ನಡೆಯಲಿದ್ದು, ಒಂದು ಹಾಡಿನ ಚಿತ್ರೀಕರಣವನ್ನು ಲಡಾಖ್ ನಲ್ಲಿ ನಡೆಸಲು ಯೋಜಿಸಲಾಗಿದೆ ಎಂದು ಚಿತ್ರದ ತಂಡ ತಿಳಿಸಿದೆ.ಇದನ್ನೂ ಓದಿ: ಪ್ರಜ್ವಲ್ ದೇವರಾಜ್ ನಟನೆಯ 'ಮಾಫಿಯಾ' ಆಡಿಯೋ ಹಕ್ಕು ದುಬಾರಿ ಮೊತ್ತಕ್ಕೆ ಮಾರಾಟ!ಬಿ ಕುಮಾರ್ ಅವರ ಬೆಂಗಳೂರು ಕುಮಾರ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮಾಫಿಯಾ ಚಿತ್ರ ನಿರ್ಮಾಣ ಮಾಡಲಾಗುತ್ತಿದ್ದು, ಇದೊಂದು ಕಮರ್ಷಿಯಲ್ ಆ್ಯಕ್ಷನ್ ಚಿತ್ರವಾಗಿದೆ. ಚಿತ್ರಕ್ಕೆ ಅನೂಪ್ ಸೀಳಿನ್ ಅವರು ಸಂಗೀತ ನೀಡಿದ್ದು, ಈಗಾಗಲೇ ತಮಿಳು, ತೆಲುಗು ಹಾಗೂ ಪಂಜಾಬಿ ಚಿತ್ರಗಳಲ್ಲಿ ಕೆಲಸ ಮಾಡಿರುವ ಸಿನಿಮಾಟೋಗ್ರಾಫರ್ ಡೆಮಲ್ ಕ್ಸೇವಿಯರ್ ಅವರು, ಮಾಫಿಯಾ ಚಿತ್ರದ ಮೂಲಕ ಸ್ಯಾಂಡಲ್'ವುಡ್'ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.