ದರ್ಶನ್ 'ಡೆವಿಲ್- ದಿ ಹೀರೋ' ಸಿನಿಮಾಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ! ದರ್ಶನ್ ನಟನೆಯ ಡೆವಿಲ್ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ. ವಾಮನ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ರಚನಾ ರೈ ಡೆವಿಲ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ದರ್ಶನ್ ನಟನೆಯ ಡೆವಿಲ್ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ. ವಾಮನ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ರಚನಾ ರೈ ಡೆವಿಲ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.ಈ ಹಿಂದೆ ಇವರು ಶಂಕರ್ ರಾಮನ್ ನಿರ್ದೇಶನದ ವಾಮನ ಸಿನಿಮಾಗೆ ನಾಯಕಿಯಾಗಿದ್ದರು. ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ವಾಮನ ಮೊದಲ ಕನ್ನಡ ಸಿನಿಮಾವಾಗಿತ್ತು.ಬ್ಯಾಡ್ಮಿಂಟನ್ ಪ್ಲೇಯರ್‌ ಆಗಿರುವ ರಚನಾ ಮಾಡೆಲ್, ಡ್ಯಾನ್ಸರ್ ಹಾಗೇ ಬರಹಗಾರ್ತಿ ಕೂಡ. ಓ‌ ಮೈ ಡಾಗ್ ಎಂಬ ಪುಸ್ತಕ ಬರೆದಿರುವ ರಚನಾ ಸಕಲಕಲಾವಲ್ಲಭೆ. ಈಗ ಸ್ಟಾರ್ ನಟನ ಚಿತ್ರಕ್ಕೆ ನಾಯಕಿಯಾಗುತ್ತಿದ್ದಾರೆ.